ನನ್ನ ಮತಕ್ಷೇತ್ರದ ಹಾಗೂ ಜಿಲ್ಲೆಯ ಜನರ ಅನುಕೂಲಕ್ಕಾಗಿ ನನ್ನ ವಯಕ್ತಿಕ ಆಸಕ್ತಿ ಮೇರೆಗೆ ಹಾಂಕಾಂಗ ಮೂಲದ ಕಂಪನಿಯಿಂದ ಸಿದ್ಧ ಉಡುಪು ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆಗೆ ಉತ್ಸುಕತೆ ತೋರಿ 6 ಸಾವಿರ ಉದ್ಯೋಗ ಸೃಷ್ಟಿಗೆ ಅವಕಾಶ ಮಾಡಿದೆ ಎಂದು ಸಚಿವರು ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ಕೆಐಎಡಿಬಿ  ಕೈಗಾರಿಕಾ ಪ್ರದೇಶದಲ್ಲಿ ಹಾಂಕಾಂಗ ಮೂಲದ ಟಾಲ್ ಅಪಾರೆಲ್ಸ್ ಜವಳಿ ಹಾಗೂ ಸಿದ್ಧ ಉಡುಪು ಉತ್ಪಾದನಾ ಕಂಪನಿಯು 700 ರಿಂದ 800 ಕೋಟಿ ರೂ ಹೂಡಿಕೆ ಮಾಡಲು ಉತ್ಸುಕತೆ ತೋರಿರುವ ಹಿನ್ನೆಲೆಯಲ್ಲಿ ಕಂಪನಿಯ ನಿರ್ದೇಶಕರಾದ ಇತಾನ್ ಯಾಂಗ್ ಅವರೊಂದಿಗೆ ಬೆಂಗಳೂರಿನಲ್ಲಿ ನಿನ್ನೆ ಸಭೆ ನಡೆಸಿದ್ದಾರೆ.

ನಿನ್ನೆ ಬೆಂಗಳೂರಿನಲ್ಲಿ ನನ್ನ ಅದ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಂಪನಿ ನಿರ್ದೇಶಕರಿಗೆ ಮಾಹಿತಿ ಒದಗಿಸಿ ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಇರುವ ಪ್ರೋತ್ಸಾಹ ಹಾಗೂ ರಿಯಾಯಿತಿ ಕುರಿತು ವಿಸ್ತೃತವಾಗಿ  ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿಗಳಾದ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಜವಳಿ ಇಲಾಖೆಯ ಆಯುಕ್ತರಾದ ಟಿ ಎಚ್ ಎಂ ಕುಮಾರ್ ಹಾಗೂ ಕೆ ಐಎಡಿಬಿ ಸಿಇಒ ಡಾ. ಮಹೇಶ್ ಇಲಾಖೆ ಅಧಿಕಾರಿಗಳು ಪಿಪಿಟಿ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿ ಮನವರಿಕೆ ಮಾಡಿದರು.

ಹಾಂಕಾಂಗ ಟಾಲ್ ಅಪಾರೆಲ್ಸ್ ಕಂಪನಿಯ ನಿರ್ದೇಶಕರಾದ ಇತಾನ್ ಯಾಂಗ್ ಅವರಿಗೆ ಬಂಡವಾಳ ಹೂಡಿಕೆಗೆ ಇರುವ ವಿಪುಲ ಅವಕಾಶಗಳು ಮನವರಿಕೆಯಾದ ಹಿನ್ನೆಲೆಯಲ್ಲಿ (ಜು.8)ರಂದು ಅಭಿವೃದ್ಧಿಪಡಿಸಿದ ಮುಳವಾಡ ಕೈಗಾರಿಕಾ ಪ್ರದೇಶಕ್ಕೆ (ಕೆಐಎಡಿಬಿ) ತಂಡ ಭೇಟಿ ನೀಡಿ ಪರಿವೀಕ್ಷಣೆ ನಡೆಸಿತು. ಈ ಸಂದರ್ಭದಲ್ಲಿ  ಜವಳಿ ಇಲಾಖೆಯ ಆಯುಕ್ತರಾದ ಟಿ ಎಚ್ ಎಂ ಕುಮಾರ್, ಜಿಲ್ಲಾಧಿಕಾರಿಗಳಾದ ಡಾ.ವಿಜಯ ಮಹಾಂತೇಶ ದಾನಮ್ಮನವರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.  

ಟಾಲ್ ಅಫಾರೆಲ್ಸ್ ಈ ಮಹತ್ವಾಕಾಂಕ್ಷಿ ಯೋಜನೆಯಾದ ಜವಳಿ ಮತ್ತು ಸಿದ್ಧ ಉಡುಪು ಘಟಕ ಸ್ಥಾಪನೆಯಿಂದ ಐದರಿಂದ ಆರು ಸಾವಿರ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ ಎಂದು ಸಭೆಯಲ್ಲಿ ತಿಳಿಸಿದರು.

LEAVE A REPLY

Please enter your comment!
Please enter your name here