ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ಸಂಕಷ್ಟದಲ್ಲಿ ಬದುಕು ಸಾಗಿಸುತ್ತಿರುವ ನಾಡಿನ ಮಹಿಳೆಯರಿಗೆ ಆರ್ಥಿಕ ನೆರವು ನೀಡಿ, ನೆಮ್ಮದಿಯ ನಾಳೆಗಳನ್ನು ಕಲ್ಪಿಸಿಕೊಡುವ ಉದ್ದೇಶದೊಂದಿಗೆ ನಾವು ಜಾರಿಗೊಳಿಸಿರುವ ಮಹತ್ವಾಕಾಂಕ್ಷೆಯ “ಗೃಹಲಕ್ಷ್ಮಿ” ಯೋಜನೆಯ ಅರ್ಜಿ ಸಲ್ಲಿಕೆಯು ಇಂದಿನಿಂದ ಆರಂಭಗೊಂಡಿದ್ದು, ಅರ್ಹ ಕುಟುಂಬಗಳ ಯಜಮಾನಿಯರು ತಪ್ಪದೇ ಅರ್ಜಿ ಸಲ್ಲಿಸಿ ಯೋಜನೆಯ ಲಾಭ ಪಡೆಯಬೇಕೆಂದು ಮಾನ್ಯ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

  • ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರದಲ್ಲಿ ಉಚಿತವಾಗಿ ನೋಂದಾಯಿಸಿ
    ಅಥವಾ
  • ಅಧಿಕೃತ ‘ಪ್ರಜಾ ಪ್ರತಿನಿಧಿ’ ಸ್ವಯಂ ಸೇವಕರು ನಿಮ್ಮ ಮನೆ ಬಾಗಿಲಲ್ಲೇ ಉಚಿತವಾಗಿ ನೋಂದಣಿ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ

ಕನಿಷ್ಠ ನಿಬಂಧನೆ, ಸರಳ ಅರ್ಜಿ ಪ್ರಕ್ರಿಯೆಯ ಮೂಲಕ ಅತಿ ಹೆಚ್ಚು ಜನರಿಗೆ ಯೋಜನೆಯ ಲಾಭ ತಲುಪಿಸಬೇಕೆಂಬುದು ನಮ್ಮ ಉದ್ದೇಶ. ನಮ್ಮ ಈ ಕಾರ್ಯಕ್ರಮ ಯಶಸ್ವಿಯಾಗಲು ನಿಮ್ಮೆಲ್ಲರ ಸಹಕಾರವಿರಲಿ.

LEAVE A REPLY

Please enter your comment!
Please enter your name here