ಶ್ರೀಮದ್ ಜಗದ್ಗುರು ರೇವಣಸಿದ್ದೇಶ್ವರ ಸಿಂಹಾಸನ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಚಂದ್ರ ಲೇಔಟ್ ನ ಶಾಖಾ ಮಠದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಮತ್ತು ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.


ಶ್ರೀನಿರಂಜನಾನಂದಪುರಿ ಮಹಾಸ್ವಾಮಿಗಳು ದಿವ್ಯ ಸಾನಿದ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಶಿವಾನಂದಪುರಿ ಮಹಾಸ್ವಾಮಿಗಳು, ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು, ಈಶ್ವರಾನಂದಪುರಿ ಮಹಾಸ್ವಾಮಿಗಳು, ಶಾಸಕರಾದ ಪ್ರಿಯಕೃಷ್ಣ, ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ಕೊಪ್ಪಳ ವಿವಿ ಕುಲಸಚಿವರಾದ ಡಾ|| ಬಿ.ಕೆ.ರವಿ, ರಾಜ್ಯ ಕುರುಬರ ಸಂಘದ ಅಧ್ಯಕ್ಷರಾದ ಸುಬ್ರಮಣಿಯವರು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here