ಬೆಂಗಳೂರು ನಗರ ಜಿಲ್ಲೆ, ಆಗಸ್ಟ್ 16 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ     2023-24ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ  ಉಪಯೋಜನೆ ಅಡಿ 2022ನೇ ಸಾಲಿನ  ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ  ಕ್ರೀಡಾಪಟುಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

          ಅರ್ಹ ಕ್ರಿಡಾಪಟುಗಳು ಅರ್ಜಿ ನಮೂನೆಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,  ಬೆಂಗಳೂರು ನಗರ ಜಿಲ್ಲೆ, ಕೊಠಡಿ ಸಂಖ್ಯೆ: 17&18, ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣ, ಕಸ್ತೂರಬಾ ರಸ್ತೆ, ಬೆಂಗಳೂರು ಇಲ್ಲಿ ಪಡೆದು  ಅರ್ಜಿಯನ್ನು ಪಡೆದು ಭರ್ತಿ ಮಾಡಿ ಸೆಪ್ಟೆಂಬರ್ 07 ರೊಳಗಾಗಿ ಸಲ್ಲಿಸಬಹುದು.

          ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 7204266766, 9480886545 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆಯ  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಾಗೂ.

ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ

ಬೆಂಗಳೂರು ನಗರ ಜಿಲ್ಲೆ, ಆಗಸ್ಟ್ 16: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ                       2022-23 ನೇ ಸಾಲಿನ  ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಕೇಂದ್ರ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮುರುಪಾವತಿಸುವ ಯೋಜನೆಯಡಿ  ಅರ್ಹ ಕ್ರೀಡಾಪಟ್ಟುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

          ಅರ್ಹ ಕ್ರಿಡಾಪಟುಗಳು ಅರ್ಜಿ ನಮೂನೆಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,  ಬೆಂಗಳೂರು ನಗರ ಜಿಲ್ಲೆ, ಕೊಠಡಿ ಸಂಖ್ಯೆ: 17&18, ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣ, ಕಸ್ತೂರಬಾ ರಸ್ತೆ, ಬೆಂಗಳೂರು-01 ಇಲ್ಲಿ ಪಡೆದು  ಅರ್ಜಿಯನ್ನು ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟೆಂಬರ್ 27 ರೊಳಗಾಗಿ ಸಲ್ಲಿಸಬಹುದು.

          ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 080-22239771, 7204266766 9480886545 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here