ಪ್ರಸಕ್ತ ಸಾಲಿನ ಡಿ. ದೇವರಾಜ ಅರಸು ಪ್ರಶಸ್ತಿಗೆ ಭಾಜನರಾಗಿರುವ ಹಿರಿಯರಾದ ಕಾಗೋಡು ತಿಮ್ಮಪ್ಪನವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನರು ಅಭಿನಂದನೆ ತಿಳಿಸಿದ್ದಾರೆ.
ಸಮಾಜವಾದಿ ಸಿದ್ಧಾಂತಕ್ಕೆ ತನ್ನನ್ನು ಅರ್ಪಿಸಿಕೊಂಡಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರು, ಉಳುವವನನ್ನೇ ಭೂಮಿಯ ಒಡೆಯನಾಗಿ ಮಾಡುವ ಭೂ ಹೋರಾಟದ ಮೂಲಕವೇ ರಾಜಕೀಯ ಜೀವನ ಪ್ರವೇಶಿಸಿದವರು.
ದೇವರಾಜ ಅರಸು ಅವರ ಗರಡಿಯಲ್ಲಿಯೇ ಬೆಳೆದಿರುವ ತಿಮ್ಮಪ್ಪನವರು ಭೂ ಸುಧಾರಣಾ ಕಾಯ್ದೆಯಷ್ಟೇ ಕ್ರಾಂತಿಕಾರಿಯಾದ “ವಾಸಿಸುವವನನ್ನೇ ಮನೆ ಒಡೆಯ” ನನ್ನಾಗಿ ಮಾಡುವ ಕ್ರಾಂತಿಕಾರಿ ಕಾಯ್ದೆಯ ರೂವಾರಿಗಳು. ಎಂದುಹೇಳಿದ್ದಾರೆ