ಹಾವೇರಿಯ ಆಲದಕಟ್ಟಿಯಲ್ಲಿರುವ ಪಟಾಕಿ ಗೋದಾಮಿನಲ್ಲಿ ನಡೆದ ಬೆಂಕಿ ಅವಘಡದಲ್ಲಿ ನಾಲ್ಕು ಜನರು ಸಜೀವ ದಹನವಾದ ಸುದ್ದಿ ತಿಳಿದು ದುಃಖವಾಗಿದೆ ಈ ಕುರಿತು
ಮಾನ್ಯ ಮುಖ್ಯಮಂತ್ರಿ ಅವರಿಗೆ ಘಟನೆ ಬಗ್ಗೆ ಮಾಹಿತಿ ನೀಡಲಾಗಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದೇನೆ ಎಂದು ಹಾವೇರಿಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ.

ಈ ಅವಘಡದ ಬಗ್ಗೆ ಹೆಚ್ಚಿನ ವರದಿ ತರಿಸಿಕೊಂಡು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು. ಹಾಗೆಯೇ ಮತ್ತೊಮ್ಮೆ ಇಂತಹ ದುರ್ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ವಹಿಸಲು ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ
ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಲಾಗಿದ್ದು, ಮೃತರ ಕುಟುಂಬಗಳಿಗೆ ಧೈರ್ಯ ತುಂಬುವ ಕೆಲಸ ಸರ್ಕಾರ ಮಾಡುತ್ತದೆ
#haveri