ತುಮಕೂರು ಸೆ.೨: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಇವರ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್ ೫ರಂದು ಬೆಳಿಗ್ಗೆ ೯.೩೦ ಗಂಟೆಗೆ ಅಗಳಕೋಟೆ ಡಾ: ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಭಾರತರತ್ನ ಡಾ: ಸರ್ವಪಲ್ಲಿ ರಾಧಾಕೃಷ್ಣನ್‌ರವರ ೧೩೬ನೇ ಜನ್ಮದಿನಾಚರಣೆ ಹಾಗೂ ಶಿಕ್ಷಕರ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಸೂರ್ಯಕಲಾ ಅವರು ತಿಳಿಸಿದ್ದಾರೆ.
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವರು, ಭಾರತ ಸರ್ಕಾರ ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಎ. ನಾರಾಯಣಸ್ವಾಮಿರವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ: ಜಿ. ಪರಮೇಶ್ವರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕರಾದ ಟಿ.ಬಿ.ಜಯಚಂದ್ರ ಅವರುಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ತುಮಕೂರು ಗ್ರಾಮಾಂತರ ಶಾಸಕರಾದ ಬಿ.ಸುರೇಶ್‌ಗೌಡ ಅವರು ಅಧ್ಯಕ್ಷತೆ ವಹಿಸುವರು.
ಸಂಸದರುಗಳಾದ ಜಿ.ಎಸ್. ಬಸವರಾಜು, ಡಿ.ಕೆ. ಸುರೇಶ್, ಜಗ್ಗೇಶ್, ಶಾಸಕರಾದ ಎಸ್.ಆರ್.ಶ್ರೀನಿವಾಸ್, ಡಾ: ಹೆಚ್.ಡಿ. ರಂಗನಾಥ್, ವಿಧಾನಪರಿಷತ್‌ನ ಶಾಸಕರಾದ ಡಾ. ವೈ.ಎ. ನಾರಾಯಣಸ್ವಾಮಿ, ಕೆ.ಎ.ತಿಪ್ಪೇಸ್ವಾಮಿ, ಚಿದಾನಂದ ಎಂ.ಗೌಡ, ರಾಜೇಂದ್ರ ಆರ್. ಶಾಸಕರಾದ ಕೆ.ಷಡಾಕ್ಷರಿ, ಎಂ.ಟಿ.ಕೃಷ್ಣಪ್ಪ, ಸಿ.ಬಿ.ಸುರೇಶ್‌ಬಾಬು, ಬಿ. ಸುರೇಶ್‌ಗೌಡ, ಹೆಚ್.ವಿ. ವೆಂಕಟೇಶ್ ಹಾಗೂ ಮಹಾಪೌರರಾದ ಪ್ರಭಾವತಿ ಎಂ., ಹೆಗ್ಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರೇವಣ್ಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಸೇರಿದಂತೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸದರಿ ಕಾರ್ಯಕ್ರಮದಲ್ಲಿ ರಾಜ್ಯ/ಜಿಲ್ಲಾ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ, ನಿವೃತ್ತ ಶಿಕ್ಷಕರಿಗೆ, ನಿಧನರಾದ ಶಿಕ್ಷಕರ ಕುಟುಂಬದವರನ್ನು ಸನ್ಮಾನಿಸಲಾಗುವುದು. ತಾಲ್ಲೂಕಿನ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಹಾಗೂ ಕಾಲೇಜು ಶಿಕ್ಷಕರು/ಸಿಬ್ಬಂದಿಯವರು ಕಡ್ಡಾಯವಾಗಿ ಕಾರ್ಯಕ್ರಮಕ್ಕೆ ಭಾಗವಹಿಸಬೇಕೆಂದು ಅವರು ತಿಳಿಸಿದ್ದಾರೆ.