ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರದಲ್ಲಿ ಸೆಪ್ಟೆಂಬರ್ ೧೫ ಶುಕ್ರವಾರ ಸಂಜೆ ೫.೦೦ ಗಂಟೆಗೆ ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯ ರವರ ಜನ್ಮ ದಿನಾಚರಣೆ ಹಾಗೂ ಶ್ರೀ ಪಾಂಡಪ್ಪ ಲಕ್ಷ್ಮಣ ಹೂಗಾರ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಬೆಂಗಳೂರಿನ ಶ್ರೀ ಜಯಚಾಮರಾಜೇಂದ್ರ ಪಾಲಿಟೆಕ್ನಿಕ್ನ ಪ್ರಾಂಶುಪಾಲರಾದ ಶ್ರೀ ಸದಾಶಿವಮೂರ್ತಿ ಟಿ.ಎಸ್. ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಬೆಂಗಳೂರು ದಕ್ಷಿಣ ಪಿ.ಡಬ್ಲೂ.ಡಿಯ ಮುಖ್ಯ ಅಭಿಯಂತರರಾದ ಶ್ರೀ ಕೆ. ದುರ್ಗಪ್ಪ ಅವರು ಪ್ರಶಸ್ತಿ ಪ್ರದಾನಮಾಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ನಾಡೋಜ ಡಾ. ಮನು ಬಳಿಗಾರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಹಿರಿಯ ರAಗಭೂಮಿ ಕಲಾವಿದರಾದ ಶ್ರೀ ಶ್ರೀಪತಿ ಮಂಜನಬೈಲು ಅವರು ಸರ್ ಎಂ. ವಿಶ್ವೇಶ್ವರಯ್ಯ ರವರ ಕುರಿತ ವಿಶೇಷ ಉಪನ್ಯಾಸ ನೀಡಲಿದ್ದಾರೆ.
೨೦೨೧ ನೆಯ ಸಾಲಿನ ಹಾಗೂ ೨೦೨೨ ನೆಯ ಸಾಲಿನ ಶ್ರೀ ಪಾಂಡಪ್ಪ ಲಕ್ಷ್ಮಣ ಹೂಗಾರ ದತ್ತಿ ಪ್ರಶಸ್ತಿಯನ್ನು ಕ್ರಮವಾಗಿ ಬೆಂಗಳೂರಿನ ಸಂಧ್ಯಾ ದೀಪ ಟ್ರಸ್ಟ್ (ರಿ) ಹಾಗೂ ಧಾರವಾಡ. ಲೇಖಕರು, ಪ್ರಸಾರ ತಜ್ಞರಾಗಿರುವ ಡಾ. ಬಸವರಾಜ ಸಾದರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಣೆಯಲ್ಲಿ ತಿಳಿಸಿದೆ.
(ವಿ.ಸೂ: ಎಲ್ಲರ ಸಮಯಕ್ಕೆ ಗೌರವ ಸಲ್ಲಿಸುತ್ತ ಕಾರ್ಯಕ್ರಮ ನಿಗದಿಯಾದ ಸಮಯಕ್ಕೆ ಸರಿಯಾಗಿ ಆರಂಭಿಸಿ ಸರಿಯಾದ ಸಮಯಕ್ಕೆ ಮುಕ್ತಾಯ ಮಾಡಲಿದ್ದೇವೆ.)