ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯ ರಚನೆಗಾಗಿ ನಿನ್ನೆಯ ದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ವಾಲ್ಮೀಕಿ ಗುರುಪೀಠದ ಮಹಾಸ್ವಾಮಿಗಳು ಶ್ರೀ ಪ್ರಸನ್ನಾನಂದ ಪುರಿ, ಸಚಿವರುಗಳಾದ ಕೆ.ಎನ್. ರಾಜಣ್ಣ ಹಾಗೂ ಬಿ. ನಾಗೇಂದ್ರ ಅವರ ಜೊತೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದೇವು. ಅದರಂತೆ ಇಂದು ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಪರಿಶಿಷ್ಟ ಪಂಗಡಗಳ ಪ್ರತ್ಯೇಕ ಸಚಿವಾಲಯ ರಚಿಸಿ ವಿಕಾಸಸೌಧದಲ್ಲಿ ಇಂದಿನಿಂದಲೇ ಕಾರ್ಯಾರಂಭ ಮಾಡಲಿದೆ ಎಂದು ಘೋಷಿಸಿದ್ದು ಸಂತಸ ತಂದಿದ್ದು ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ.
ಇಲ್ಲಿವರೆಗೂ ಪರಿಶಿಷ್ಟ ವರ್ಗಗಳಿಗೆ ಪ್ರತ್ಯೇಕ ಸಚಿವಾಲಯ ಇರಲಿಲ್ಲ, ಇದೀಗ ಪ್ರತ್ಯೇಕ ಸಚಿವಾಲಯ ರಚನೆ ಮಾಡಲಾಗಿದ್ದು, ಇದರಿಂದ ಪರಿಶಿಷ್ಟ ವರ್ಗಗಳ ಜನರ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಲೋಕೋಪಯೋಗಿ ಸಚಿವ ಸತಿಸ್ ಜಾರಕಿಹೊಳಿ ಹೇಳಿದ್ದಾರೆ.