ಕಲಬುರಗಿ: ಹಿರೇಸಿಂಗನಗುತ್ತಿ ಗ್ರಾಮದ ಕವಿ, ಕಲಾವಿದ, ಗಾಯಕ, ನಿರೂಪಕ, ವ್ಯಂಗ್ಯ ಚಿತ್ರಕಾರ, ಸರಕಾರಿ ಪ್ರೌಢಶಾಲೆ ಕಬ್ಬರಗಿಯ ಚಿತ್ರಕಲಾ ಶಿಕ್ಷಕ ತಿರುಪತಿ ಚಲವಾದಿ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕೊಪ್ಪಳ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಕುಷ್ಟಗಿ ಅವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕುಷ್ಟಗಿ ತಾಲೂಕು ಮಟ್ಟದ 2023-24 ನೇ ಸಾಲಿನ ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಜಾನಪದ ಗೀತೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಕಳೆದ ಬಾರಿ ಬಾಗಲಕೋಟೆ ಜಿಲ್ಲಾ ಮಟ್ಟದ ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಭಕ್ತಿಗೀತೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಧಾರವಾಡದಲ್ಲಿ ಜರುಗಿದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.