ಜಗಳೂರು:ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಹನ್ನೊಂದು ಬಾರಿ ಮರು ಮುದ್ರಣಗೊಂಡ “ಸೌಂದರ್ಯ ಸಮೀಕ್ಷೆ” ಎಂಬ ಪ್ರಸಿದ್ಧ ಕೃತಿಯ ಕೊಡುಗೆ ಕೊಟ್ಟವರು ಜಿ. ಎಸ್. ಶಿವರುದ್ರಪ್ಪನವರು ಎಂದು ಜಗಳೂರು ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಹನುಮಂತೇಶ್ ಅವರು ಅಭಿಪ್ರಾಯಪಟ್ಟರು.
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಜಗಳೂರು ಹಾಗೂ ಸರ್ಕಾರಿ ಪ್ರೌಢಶಾಲೆ ತೋರಣಗಟ್ಟೆ ಇವರ ಸಂಯುಕ್ತಾಶ್ರಯದಲ್ಲಿ, ತೋರಣಗಟ್ಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜರುಗಿದ ಶಾಲಾ ಅಂಗಳದಲ್ಲಿ ಸಾಹಿತ್ಯೋತ್ಸವ ಕಾರ್ಯಕ್ರಮದಲ್ಲಿ ಜಿ.ಎಸ್.ಶಿವರುದ್ರಪ್ಪ ಎಂಬ ವಿಷಯ ಕುರಿತು ಅವರು ಮಾತನಾಡಿದರು.
ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಜಿ.ಎಸ್.ಶಿವರುದ್ರಪ್ಪನವರ ಸಂಕಲ್ಪಗೀತೆ ಎಂಬ ಪದ್ಯವಿದೆ.
ಹಾಗಾಗಿ ವಿದ್ಯಾರ್ಥಿಗಳೂ ಕೂಡ ತಮ್ಮ ಬದುಕನ್ನು ರೂಪಿಸಿಕೊಳ್ಳುವ ಸಂಕಲ್ಪ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.
ಕನ್ನಡ ಶಿಕ್ಷಕರಾದ ಶಿವಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸೊಗಸಾಗಿ,ಸಾಮೂಹಿಕವಾಗಿ ನಾಡಗೀತೆ ಹಾಡಲಾಯಿತು.
ವೇದಿಕೆ ಮೇಲಿನ ಸರ್ವ ಗಣ್ಯರು ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಜಾನಪದ ಸಂಶೋಧಕರಾದ ಡಾ.ರಾಜಪ್ಪ ನಿಬಗೂರು ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಇಲ್ಲಿ ಕನ್ನಡ ಹಬ್ಬದ ವಾತಾವರಣವಿದ್ದು ಇಂತಹ ಕನ್ನಡ ಶಾಲೆಯನ್ನು ನೋಡಿ ತುಂಬಾ ಖುಷಿಯೆನಿಸಿದೆ ಎಂದರು.
ಇದೇ ವೇಳೆ ತೋರಣಗಟ್ಟೆ ಗ್ರಾಮದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರನ್ನು ಹಾಗೂ ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಪಾಲ್ಗೊಂಡವರನ್ನು ಭಾವ ಪೂರ್ವಕವಾಗಿ ಸ್ಮರಿಸಿದರು.
ಯುವ ಸಾಹಿತಿ ಚಂದ್ರಕಾಂತ . ಹೆಚ್. ರವರು ಮಾತನಾಡಿ ವಿದ್ಯಾರ್ಥಿಗಳು ಟಿವಿ ಮತ್ತು ಮೊಬೈಲ್ ಗೀಳಿನಿಂದ ಹೊರಬಂದು ಪಠ್ಯ ಪುಸ್ತಕಗಳನ್ನು ಚೆನ್ನಾಗಿ ಅಭ್ಯಾಸ ಮಾಡಿ ಹಾಗೂ ಕನ್ನಡದ ಬಗ್ಗೆ ಭಾಷಾಭಿಮಾನ ಬೆಳೆಸಿಕೊಳ್ಳಿ ಎಂದು ಕರೆ ನೀಡಿದರು.
ನಿವೃತ್ತ ಶಿಕ್ಷಕರಾದ ಕೃಷ್ಣಮೂರ್ತಿಯವರು ಮಾತನಾಡಿದರು.
ರಾಜ್ಯ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದರಾದ ಗಂಜಿಕಟ್ಟೆ ಕೃಷ್ಣಮೂರ್ತಿಯವರು ವಿದ್ಯಾರ್ಥಿಗಳಿಗೆ ಒಂದಷ್ಟು ಅರಿವಿನ ಪಾಠ ಮಾಡುವುದರ ಜೊತೆಗೆ ಎಲ್ಲರನ್ನೂ ನಗೆಗಡಲಲ್ಲಿ ತೇಲಿಸಿದ್ದು ಕಾರ್ಯಕ್ರಮದ ವಿಶೇಷತೆ ಆಗಿತ್ತು.
ಮುಖ್ಯ ಶಿಕ್ಷಕರಾದ ಜಗದೀಶ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಕಲಾವಿದರು ಹಾಗೂ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ತೋರಣಗಟ್ಟೆ ಬಡಪ್ಪ, ಶಿಕ್ಷಕರಾದ ಪ್ರವೀಣ್, ಕುಮಾರ ಸ್ವಾಮಿ, ವೀರೇಶ್, ಸತೀಶ್, ರಮೇಶ್, ತಿಪ್ಪಮ್ಮ, ಕಾವ್ಯ, ಕರಿಬಸಪ್ಪ, ಮತ್ತು ಪ್ರ ಶಿಕ್ಷಣಾರ್ಥಿ ಗಳಾದ ಕೆ.ಎಂ.ವೆಂಕಟೇಶ್, ರಂಜಿತಾ. ಜೆ.ಎನ್. ಹಾಗೂ ಶಾಲಾ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹಾಜರಿದ್ದರು.