ಸುವರ್ಣಸೌಧ,ಬೆಳಗಾವಿ ಡಿ.06:
ಭಾರತರತ್ನ,ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿಬ್ಬಾಣ ದಿನದ ಅಂಗವಾಗಿ ಸುವರ್ಣ ಸೌಧಧ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಸಚಿವರಾದ ಎಚ್.ಸಿ.ಮಹಾದೇವಪ್ಪ, ಆರ್.ಬಿ.ತಿಮ್ಮಾಪುರ, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೇರಿದಂತೆ ಅನೇಕ ಶಾಸಕರು ,ಗಣ್ಯರು ಹಾಗೂ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.