ಧಾರವಾಡ ಫೆ.6: ಪ್ರತಿ ವರ್ಷದಂತೆ ಸಂತ ಶ್ರೀ ಸೇವಾಲಾಲ ಜಯಂತಿ, ಶ್ರೀ ಸವಿತಾ ಮಹರ್ಷಿ ಜಯಂತಿ, ಛತ್ರಪತಿ ಶ್ರೀ ಶಿವಾಜಿ ಮಾಹಾರಾಜರ ಜಯಂತಿ ಹಾಗೂ ಸಂತಕವಿ ಶ್ರೀ ಸರ್ವಜ್ಞ ಜಯಂತಿಗಳನ್ನು ವಿಜೃಂಭಣೆಯಿಂದ ಆಚರಿಸುವ ಕುರಿತು ಇಂದು ಬೆಳಗ್ಗೆ (ಫೆ.6) ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಜರುಗಿತು.
ಅವರು ಮಾತನಾಡಿ, ಫೆಬ್ರವರಿ 15 ರಂದು ಬೆಳಗ್ಗೆ 11 ಗಂಟೆಗೆ ಸಂತ ಶ್ರೀ ಸೇವಾಲಾಲ ಜಯಂತಿ, ಫೆಬ್ರವರಿ 16 ರಂದು ಬೆಳಗ್ಗೆ 11 ಗಂಟೆಗೆ ಶ್ರೀ ಸವಿತಾ ಮಹರ್ಷಿ ಜಯಂತಿ, ಫೆಬ್ರವರಿ 19 ರಂದು ಬೆಳಗ್ಗೆ 11 ಗಂಟೆಗೆ ಛತ್ರಪತಿ ಶ್ರೀ ಶಿವಾಜಿ ಮಾಹಾರಾಜರ ಜಯಂತಿ ಮತ್ತು ಫೆಬ್ರವರಿ 20 ರಂದು ಬೆಳಗ್ಗೆ 11 ಗಂಟೆಗೆ ಸಂತಕವಿ ಶ್ರೀ ಸರ್ವಜ್ಞ ಜಯಂತಿ ಆಚರಿಸಲಾಗುವುದು. ಈ ಎಲ್ಲ ಜಯಂತಿ ಕಾರ್ಯಕ್ರಮಗಳನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕøತಿಕ ಸಭಾಭವನದಲ್ಲಿ ಆಚರಿಸಲು ನಿರ್ಧರಿಸಲಾಗಿದೆ. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ಏರ್ಪಡಿಸಲಾಗುವುದು ಎಂದು ತಿಳಿಸಿದರು.
ಸಭೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ವಿವಿಧ ಸಮಾಜದ ಮುಖಂಡರು ಭಾಗವಹಿಸಿ ಸಲಹೆ, ಸೂಚನೆ ನೀಡಿದರು. ಕನ್ನಡ ಮತ್ತು ಸಾಂಸ್ಕೃತಿಕ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.


LEAVE A REPLY

Please enter your comment!
Please enter your name here