ದಾವಣಗೆರೆ: ರೈಫಲ್ ನಿಂದ ಗುಂಡು ಹಾರಿಸಿಕೊಂಡು ದಾವಣಗೆರೆಯ ಸಶಸ್ತ್ರ ಮೀಸಲು ಪಡೆಯ ಪೇದೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಾವಣಗೆರೆ ಮಹಾನಗರ ಪಾಲಿಕೆಯ ಸ್ಟ್ರಾಂಗ್ ರೂಂ ಬಳಿ  ನಡೆದಿದೆ.

ವಿಜಯನಗರ ಜಿಲ್ಲೆ ಹರಪನಹಳ್ಳಿ ಪಟ್ಟಣಸ ನಿವಾಸಿಯಾಗಿರು ಗುರುಮೂರ್ತಿ (34) ರೈಫಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಕಾನ್ಸ್ ಸ್ಟೇಬಲ್ ಎಂದು ತಿಳಿದು ಬಂದಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ, 

ರೈಫಲ್ ನಿಂದ ಗುಂಡು ಹಾರಿಸಿಕೊಂಡು ರಕ್ತದ ಮಡುವಿನಲ್ಲಿ ಬಿದ್ದ ಡಿ ಎ ಆರ್ ಪರದೆಯನ್ನು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ, ಕಳೆದ ಕೆಲ ದಿನಗಳಿಂದ ಪಾಲಿಕೆಯಲ್ಲಿ ನಿರ್ಮಿಸಿರುವ ಸ್ಟ್ರಾಂಗ್ ರೂಂ ಇವಿಎಂ ಮಷಿನ್ ಕಾವಲು‌ ಸೇವೆಯಲ್ಲಿ ಗುರುಮೂರ್ತಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದರು ಎನ್ನಲಾಗಿದೆ, ಕೌಟುಂಬಿಕ ಕಲಹದ ಹಿನ್ನಲೆ ಆತ್ಮಹತ್ಯೆಗೆ ಯತ್ನ ನಡೆಸಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು ಸ್ಪಷ್ಟ ಮಾಹಿತಿ ತಿಳಿಯಬೇಕಿದೆ, ಪುರ್ವ ವಲಯ ಐಜಿಪಿ ತ್ಯಾಗರಾಜನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು, ದಾವಣಗೆರೆ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  ಘಟನೆ‌ ನಡೆದಿದ್ದು ಹೆಚ್ಚಿನ ತನಿಖೆ ಮುಂದುವರಿದಿದೆ ಎನ್ನಲಾಗುತ್ತಿದೆ.

LEAVE A REPLY

Please enter your comment!
Please enter your name here