ಮಂಡ್ಯ ಜಿಲ್ಲೆಯಲ್ಲಿ 20 ಕೋಟಿ ರೂ ವೆಚ್ಚದಲ್ಲಿ ರೈಲ್ವೆ ನಿಲ್ದಾಣದ ನವೀಕರಣ ಕಾಮಗಾರಿಗೆ ಪ್ರಧಾನಮಂತ್ರಿಗಳು ವರ್ಚುಯಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು.

ಮಂಡ್ಯ ರೈಲ್ವೆ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ವರ್ಚುಯಲ್ ಕಾರ್ಯಕ್ರಮದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಭಾಗವಹಿಸಿ ಮಾತನಾಡಿದರು.

ಮಂಡ್ಯ ಜಿಲ್ಲೆಯಲ್ಲಿ ಹಲವಾರು ಸಮಸ್ಯೆಗಳಿವೆ. ಅವುಗಳ ಪರಿಹರಿಸಲು ಒತ್ತು ನೀಡಲಾಗುತ್ತಿದೆ. ಅಭಿವೃದ್ಧಿ ರೂಪಿಸಲಾಗುವ ಕಾಮಗಾರಿಗಳಿಗೆ ಜನರಿಂದ ಸಂಗ್ರಹಿಸುವ ತೆರಿಗೆ ಹಣವನ್ನು ಬಳಸಲಾಗುತ್ತದೆ. ಜನರ ತೆರಿಗೆ ಹಣ ಎಲ್ಲೂ ಸಹ ವ್ಯರ್ಥ ಅಥವಾ ಪೋಲಾಗದಂತೆ ನೋಡಿಜೊಳ್ಳುವುದು ಜನ ಪ್ರತಿನಿಧಿಗಳ ಕರ್ತವ್ಯವಾಗಿದೆ ಎಂದರು.

ಕರ್ನಾಟಕದ ಜನಸಂಖ್ಯೆ ಕಡಿಮೆ ಆದರೆ ತೆರಿಗೆ ಹೆಚ್ಚು ಸಂಗ್ರಹಣೆಯಾಗುತ್ತದೆ.ಕೇಂದ್ರ ಸರ್ಕಾರ ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸರ್ಕಾರಿ ಆಸ್ಪತ್ರೆಯಲ್ಲು ಸಹ ಕೆಲವು ಕಾಮಗಾರಿ ಕೆಲಸಗಳು ಬಾಕಿ ಇದ್ದು ಆಸ್ಪತ್ರೆಗೆ ಬಂದಂತಹ ಜನರಿಗೆ ಚಿಕಿತ್ಸೆ ನೀಡಲು ಬೆಡ್ ಇಲ್ಲದ ಕಾರಣ ಅವುಗಳನ್ನು ಮುಂದಿನ ದಿನಗಳಲ್ಲಿ 400 ಬೆಡ್ ಇರುವುದನ್ನು 900 ಬೆಡ್ ವ್ಯವಸ್ಥೆ ಮಾಡಲಾಗುವುದು ಎಂದರು.

ಮಂಡ್ಯದ ಮುಖ್ಯ ರಸ್ತೆಯ ನಿರ್ಮಾಣಕ್ಕೆ 30 ಕೋಟಿ ರೂ ಸರ್ಕಾರದಿಂದ ಮಂಜೂರಾಗಿದ್ದು, ಪ್ರಾರಂಭದ ಹಂತದಲ್ಲಿದೆ. ಜಿಲ್ಲೆಯಲ್ಲಿ ಸಾಕಷ್ಟು ಮೂಲಭೂತ ಸಮಸ್ಯೆಗಳಿದ್ದು, ಹಂತ ಹಂತವಾಗಿ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಶೇಕ್ ತನ್ವೀರ್ ಆಸಿಫ್ ರೈಲ್ವೆ ಅಧಿಕಾರಿ ಪರೀಕ್ಷಿತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here