ಹುಣಸಗಿ:ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಭಾನುವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು.
ಸರಳ ಸ್ವಭಾವದ ವ್ಯಕ್ತಿತ್ವ ಹೊಂದಿರುವ 30 ವರ್ಷದ ರಾಜಕೀಯ ಜೀವನದಲ್ಲಿ ನಾಲ್ಕು ಬಾರಿ ಶಾಸಕರಾಗಿ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಇತ್ತಿಚಿಗೆ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.
ಮೃತರು ಪತ್ನಿ ಇಬ್ಬರು ಪುತ್ರರು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
ಸುರಪುರದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ಜರುಗುವುದು ಎಂದು ಮೂಲಗಳಿಂದ ತಿಳಿದು ಬಂದಿದೆ
ಶೋಕ ಸಂತಾಪ: ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನಿಧನಕ್ಕೆ
ಬ್ಲಾಕ್ ಕಾಂಗ್ರೆಸ ಅಧ್ಯಕ್ಷ ಚಂದ್ರಶೇಖರ ದಂಡಿನ, ಕೃಷಿಕ ಸಮಾಜದ ಉಪಾಧ್ಯಕ್ಷ ನಾಗಣ್ಣ ಸಾಹು ದಂಡಿನ್, ಮಾಜಿ ಜಿಪಂ ಅಧ್ಯಕ್ಷ ರಾಜಶೇಖರಗೌಡ ಪಾಟೀಲ, ಕೆಪಿಸಿಸಿ ಸದಸ್ಯ ಸಿದ್ದಣ್ಣ ಮಲಗಲದಿನ್ನಿ, ಶರಣಗೌಡ ಪಾಟೀಲ, ಬಸವರಾಜ ಸಜ್ಜನ, ಶರಣುದಂಡಿನ, ಸಿದ್ದು ಮುದಗಲ್, ಆರ್ ಎಮ್ ರೇವಡಿ, ಖಾಸಿಮಸಾಬ ಚೌದ್ರಿ, ಕಾಸಿಮಸಾಬ ಟೊಣ್ಣೂರ, ರವಿ ಮಲಗಲದಿನ್ನಿ, ತಾರಾನಾಥ ಚೌವ್ಣಾಣ, ಹುಣಸಗಿ ಪಟ್ಟಣ ಪಂಚಾಯತ ನೂತನ ಸದಸ್ಯರು ಸೇರಿದಂತೆ ಅನೇಕ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶೋಕ ಸಂತಾಪ ವ್ಯಕ್ತಪಡಿಸಿದ್ದಾರೆ.