ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂತನವಾಗಿ ಆರಂಭವಾಗಿರುವ ಇಂದಿರಾ ಕ್ಯಾಂಟೀನ್‌ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಿದರು.

ಶ್ರಮಿಕರು, ಬಡವರಿಗೆ ನೆರವಾಗುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಈ ಮಹತ್ವದ ಹೆಜ್ಜೆ ಇಟ್ಟಿದೆ. ಇನ್ನುಮುಂದೆ ಏರ್‌ಪೋರ್ಟ್‌ ಕ್ಯಾಬ್‌ ಚಾಲಕರು, ಕಾರ್ಮಿಕರು ಹಾಗೂ ಮೊದಲಾದವರು ಇಂದಿರಾ ಕ್ಯಾಂಟೀನ್‌ ಸೌಲಭ್ಯ ಪಡೆಯಬಹುದಾಗಿದೆ.

ಉಪ ಮುಖ್ಯಮಂತ್ರಿ ಶ್ರೀ ಡಿ ಕೆ ಶಿವಕುಮಾರ್,ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಶ್ರೀ ಕೆ ಎಚ್ ಮುನಿಯಪ್ಪ, ಪೌರಾಡಳಿತ ಸಚಿವರಾದ ಶ್ರೀ ಕೆ ರಹಿಂಖಾನ್, ಬಿಬಿಎಂಪಿ ಮುಖ್ಯ ಕಮಿಷನರ್ ತುಷಾರ್ ಗಿರಿನಾಥ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here