ಬೆಂಗಳೂರು: ವಿಧಾನಸೌಧ ದಲ್ಲಿ ನಡೆದ ನಗರಾಭಿವೃದ್ಧಿ ಇಲಾಖೆಯ ಅಡಿಯಲ್ಲಿ ಬರುವ ರಾಜ್ಯದ 10 ಮಹಾನಗರ ಪಾಲಿಕೆಗಳು, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಕೆಯುಐಡಿಎಫ್ಸಿ,ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿ ಕಳೆದ ಮೂರು ತಿಂಗಳಿನಿಂದ ನಡೆದಿರುವ ಕಾಮಗಾರಿಗಳು ಮತ್ತು ಕೈಗೊಂಡ ಯೋಜನೆಗಳ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದೆ.

ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ದೀಪ ಚೋಳನ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಶರತ್.ಬಿ, ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ‌ವ್ಯವಸ್ಥಾಪಕ ನಿರ್ದೇಶಕ ಜಿ ಲಕ್ಷ್ಮೀಕಾಂತ ರೆಡ್ಡಿ, ನಗರಾಭಿವೃದ್ಧಿ ಪ್ರಾಧಿಕಾರಗಳು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತರಾದ ವೆಂಕಟಾಚಲಪತಿ, ನಗರ ಮತ್ತು ಗ್ರಾಮಾಂತರ ಯೋಜನೆ ನಿರ್ದೇಶಕರಾದ ‌ತಿಪ್ಪೇಸ್ವಾಮಿ, ಪೌರಾಡಳಿತ ನಿರ್ದೇಶನಲಾಯದ ಜಂಟಿ ನಿರ್ದೇಶಕರಾದ ವಿಜಯ ಕುಮಾರ್, ಮುಖ್ಯ ಅಭಿಯಂತರ ಚಂದ್ರಪ್ಪ ಸೇರಿದಂತೆ ಕೆಲ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here