ಕೊಪ್ಪಳ: ಕೊಪ್ಪಳದ ತಾಲೂಕ ಪಂಚಾಯತ್ ಸಭಾಂಗಣದಲ್ಲಿ 2024-25ನೇ ಸಾಲಿನ ಮೊದಲನೇ ತ್ರೈಮಾಸಿಕ ಕೆ. ಡಿ. ಪಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಇಲ್ಲವಾದಲ್ಲಿ ಅಂತಹ ಅಧಿಕಾರಿಗಳ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.
ಸರ್ಕಾರದ ಎಲ್ಲಾ ಯೋಜನೆಗಳು ಸಾರ್ವಜನಿಕರಿಗೆ ತಲುಪಿಸುವ ರೀತಿಯಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು.
ಎಸ್. ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕೊಪ್ಪಳ ಕಳೆದ ಬಾರಿಗಿಂತ ಹೀನಾಯ ಸ್ಥಿತಿಗೆ ಬಂದಿರುವುದು ಅತ್ಯಂತ ಖಂಡನೀಯ.ಮುಂದಿನ ಬಾರಿ ಈ ತರ ಆಗಬಾರದು ರಾಜ್ಯದಲ್ಲಿ ಪ್ರಥಮ ಸ್ಥಾನ ಬಂದಿರುವ ಜಿಲ್ಲೆಯ ಶಿಕ್ಷಕರನ್ನು ಕೊಪ್ಪಳಕ್ಕೆ ಕರೆಯಿಸಿ ಇಲ್ಲಿನ ಶಿಕ್ಷಕರಿಗೆ ತರಬೇತಿ ಕೊಡಿಸಿ ಎಂದು ಬಿಇಓ ಅವರಿಗೆ ಸೂಚಿನೆ ನೀಡಿದ್ದಾರೆ,
ರೈತರಿಗೆ ಬಿತ್ತನೆ ಬೀಜಗಳು ಸಮಸ್ಯೆ ಆಗದಂತೆ ನೋಡಿಕೊಳ್ಳಿ ಎಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ತಾಲೂಕಿನ ಪ್ರತಿಯೊಂದು ಗ್ರಾಮಕ್ಕೂ ಕೆ ಎಸ್ ಆರ್ ಟಿ ಸಿ ಬಸ್ ಗಳು ಹೋಗಬೇಕು ಅದರಲ್ಲೂ ವಿದ್ಯಾರ್ಥಿಗಳಿಗೆ ಅನುಕೂಲಕರ ಆಗುವ ಸಮಯಕ್ಕೆ ಬಸ್ ಗಳು ಹೋಗಬೇಕು ಆ ರೀತಿಯಲ್ಲಿ ಸಮಯ ನಿಗದಿಪಡಿಸಿ ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಹಾಸ್ಟೆಲ್ ಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು, ವಿದ್ಯಾರ್ಥಿಗಳಿಗೆ ಗುಣಮಟ್ಟವಾದ ಆಹಾರ ನೀಡಬೇಕೆಂದು ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದ್ದಾರೆ