ಬೆಂಗಳೂರು:ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು ಆದ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಬೈರತಿ ಸುರೇಶ್ ರವರು ದಿನಾಂಕ 20-6-2024 ರಂದು ಕ್ಷೇತ್ರದ ಗಂಗಾನಗರದ ಬಿಬಿಎಂಪಿ ಹೈಸ್ಕೂಲ್ ಬಳಿ ಅಲ್ಪಸಂಖ್ಯಾತ ಅನುದಾನದಡಿ ನೂತನ ಬೋರ್ ವೆಲ್ ಕೊರೆಯುವ ಕಾಮಗಾರಿಗೆ ಹಾಗೂ 2023-24ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ಹೈಸ್ಕೂಲ್ ನ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಆರ್.ಟಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಾರ್ಡ್ ಅಧ್ಯಕ್ಷರು, ಪಕ್ಷದ ಮುಖಂಡರು, ಪ್ರಾಥಮಿಕ ಹಾಗೂ ಹೈಸ್ಕೂಲ್ ಪ್ರಾಧ್ಯಾಪಕರು, ಬಿಬಿಎಂಪಿ, ಬೆಂಗಳೂರು ಜಲ ಮಂಡಳಿ ಅಧಿಕಾರಿಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here