ಹಾವೇರಿ:ಹಾವೇರಿಯಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ದಿನಾಂಕ:೩೦-೦೬-೨೦೨೪ರಂದು ಶ್ರೀ ಸಿದ್ದರಾಮೇಶ್ವರ ಸಭಾಭವನದಲ್ಲಿ ಕರ್ನಾಟಕ ಕಾರ್ಯ ನಿರತಪತ್ರಕರ್ತರಸಂಘದ ರಾಜ್ಯ ಅಧ್ಯಕ್ಷರಾದ ಶ್ರೀ ಶಿವಾನಂದ ತಗಡೂರ್ ರವರ ಅಧ್ಯಕ್ಷತೆಯಲ್ಲಿ ಏರ್ಪಡಿಸಿದ್ದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಎಪಿಎಂಸಿ, ಸಕ್ಕರೆ ಮತ್ತು ಜವಳಿ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಉದ್ಘಾಟಿಸಿದರು.
ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಉಪ ಸಭಾಪತಿ ರುದ್ರಪ್ಪ ಲಮಾಣಿ, ಮುಖ್ಯ ಸಚೇತಕ ಸಲೀಂ ಅಹಮದ್, ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ವಿ.ಲೋಕೇಶ, ಕಾರ್ಯದರ್ಶಿ ನಿಂಗಪ್ಪ ಚಾವಡಿ, ಹಾವೇರಿ ಜಿಲ್ಲಾಧ್ಯಕ್ಷ ನಾಗರಾಜ ಕುರವತ್ತೇರ ಮತ್ತಿತರರು ಹಾಜರಿದ್ದರು.
ರಾಜ್ಯದ ಇತರೆ ಜಿಲ್ಲೆ ಗಳಿಂದ ಹಲವಾರು ಪತ್ರಕರ್ತ ಮಿತ್ರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಕಲಬುರಗಿ,ಬೆಳಗಾವಿ,ವಿಜಯಪುರ,ಬೀದರ್,ಚಿತ್ರದುರ್ಗ,ದಕ್ಷಿಣಕನ್ನಡ,ಬಾಗಲಕೋಟೆ,ದಾವಣಗೆರೆಶಿವಮೊಗ್ಗ,ಸೇರಿದಂತೆ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಯ ಪತ್ರಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.