ವಿಜಯಪುರ:ಕೇಂದ್ರ ಸರ್ಕಾರ ದೆಹಲಿಯ ಹಳೆಯ ಸಂಸತ್ ಭವನದ ಮುಂದೆ ಇರುವ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗಳನ್ನು ತೆರವುಗೊಳಿಸಿರುವದನ್ನು ಖಂಡಿಸಿ ಇಂದು ಬುದ್ಧ ಬಸವ ಅಂಬೇಡ್ಕರ್ ಸೇವಾ ಸಂಸ್ಥೆ ಅಧ್ಯಕ್ಷರಾದ ತುಳಸಿ ಹರಿಜನ ಅವರ ನೇತೃತ್ವದಲ್ಲಿ ಹಾಗೂ ಎಲ್ಲ ದಲಿತ ಸಂಘಟನೆಗಳ ಸಹಯೋಗದಲ್ಲಿ ವಿಜಯಪುರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಿ ಮಾನ್ಯ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು