ಮೂಡಲಗಿ : ತಾಲೂಕಿನ ನಾಗನೂರ ಗ್ರಾಮದ ಅರಣ್ಯ ಸಿದ್ದೇಶ್ವರ ತೋಟದ ಸಿದ್ದಪ್ಪ ಜಾವಲಿ ಎಂಬುವವರ ಗದ್ದೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆದ ಹಿನ್ನಲೆ ಸ್ಥಳಕ್ಕೆ ಧಾವಿಸಿದ ಅರಣ್ಯ ಅಧಿಕಾರಿ ಸಂಜು ಸವಸುದ್ದಿ ಪರಿಶೀಲನೆ ನಡೆಸಿ ಅದು ಚಿರತೆ ಅಲ್ಲ ಕಾಡು ಬೆಕ್ಕು ಎಂದು ತಿಳಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಮಹಾದೇವ ಸನ್ನಮುರಿ, ಸಾರ್ವಜನಿಕರ ಹಿತ ದೃಷ್ಟಿಯಿಂದ ರಾತ್ರಿ ವೇಳೆ ಒಬ್ಬೊಬ್ಬರಾಗಿ ತಿರುಗಾಡಬೇಡಿ ಹಾಗೂ ಮಕ್ಕಳು, ಜಾನುವಾರುಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಡಂಗುರ ಸಾರುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪಕ್ಕದಲ್ಲೇ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ಇರುವುದರಿಂದ ತಹಶೀಲ್ದಾರ್ ಮಹಾದೇವ ಸನ್ನಮುರಿ ಅವರ ನಿರ್ದೇಶನದಂತೆ ಮಕ್ಕಳ ಹಿತ ದೃಷ್ಟಿಯಿಂದ ಜು.24 ಬುಧುವಾರ ಒಂದು ದಿನ ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಬಿಇಓ ಅಜೀತ್ ಮನ್ನಿಕೇರಿ ತಿಳಿಸಿದ್ದಾರೆ.