ಬೆಂಗಳೂರು:ಕರ್ನಾಟಕ ವಿಧಾನಸಭೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಲೆಜಿಸ್ಲೇಜರ್ ಕಪ್-2024 ಚೆಸ್ ಪಂದ್ಯಾವಳಿಯು ಅತ್ಯಂತ ಯಶಸ್ವಿಯಾಗಿ ನಡೆಯಿತು.
ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ವಿಶ್ವ ಚೆಸ್ ದಿನದ ಅಂಗವಾಗಿ ಈ ಪಂದ್ಯಾವಳಿ ಆಯೋಜಿಸಿದ್ದು, ಆರು ಸುತ್ತುಗಳಲ್ಲಿ ಪಂದ್ಯಗಳು ನಡೆದು ನೋಡುಗರ ಹುಬ್ಬೇರುವಂತೆ ಮಾಡಿತು.
ಪಂದ್ಯಾಕೂಟದ ಎಲ್ಲಾ ಸುತ್ತಿನಲ್ಲಿ ಜಯ ದಾಖಲಿಸುವ ಮೂಲಕ ಶಾಸಕರಾದ ಅಜಯ್ ಸಿಂಗ್ ಅವರು 2 ಲಕ್ಷ ನಗದನ್ನು ಒಳಗೊಂಡಿರುವ ಪ್ರಥಮ ಬಹುಮಾನ ಗೆದ್ದರೆ, ಖಾನಾಪುರ ಶಾಸಕ ವಿಠ್ಠಲ್ ಸೋಮಣ್ಣ ಹಲಗೇಕರ್ ಅವರು ದ್ವಿತೀಯ ಬಹುಮಾನ ಮತ್ತು ಪ್ರತಾಪ್ ಸಿಂಹ ನಾಯಕ್ ಅವರು ತೃತೀಯ ಬಹುಮಾನ ಗಳಿಸಿದರು.
ವಿಜೇತರೆಲ್ಲರಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹುಮಾನ ವಿತರಿಸಿ ಶುಭ ಹಾರೈಸಿದರು.