ತುಮಕೂರು:2024ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರನ್ನು ಪೊರೈಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ.
ದಿನಾಂಕ:25.07.2024ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಿರ್ದೇಶನಗಳಂತೆ
2024ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರಸ್ತುತ ತುಮಕೂರು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಿಲ್ಲೆಯ ಎಲ್ಲಾ ಜಲಾಮೂಲಗಳಿಗೆ ಒಳ ಹರಿವು ಪ್ರಾರಂಭವಾಗಿದೆ ಹಾಗೂ ನಗರ ಮತ್ತು ಗ್ರಾಮೀಣ ಜನವಸತಿ ಪ್ರದೇಶಗಳಿಗೆ ಕುಡಿಯುವ ನೀರನ್ನು ಒದಗಿಸುವ ನಿಟ್ಟಿನಲ್ಲಿ ಹೇಮಾವತಿ ನಾಲೆಯಿಂದ ಕುಡಿಯುವ ನೀರಿನ ಯೋಜನೆಗಳ ಕೆರೆಗಳಿಗೆ ನೀರನ್ನು ಹರಿಸಲಾಗುತ್ತಿದೆ.ಆದ್ದರಿಂದ, ನಗರ ಮತ್ತು ಗ್ರಾಮೀಣ ಜನವಸತಿ ಪ್ರದೇಶಗಳಿಗೆ ಕಡ್ಡಾಯವಾಗಿ ಶುದ್ಧ ಕುಡಿಯುವ ನೀರನ್ನು ಪೊರೈಸುವ ಉದ್ದೇಶದಿಂದ ಕುಡಿಯುವ ನೀರಿನ ವಿವಿಧ ಜಲ ಮೂಲಗಳಿಂದ (ನಾಲೆ/ಕೆರೆ/ಓಹಚ್‌ಟಿ/ಸಿಸ್ಟರ್ನ್/ಆರ್‌ಓ ಪ್ಲಾಂಟ್/ಡಬ್ಲ್ಯೂಟಿಪಿ/ಕೊಳವೆಬಾವಿ ಇತ್ಯಾದಿ) ಸರಬರಾಜಾಗುವ ನೀರನ್ನು ನಿಯಮಾನುಸಾರ ಪರೀಕ್ಷಿಸಿ, ಸರಬರಾಜಿಗೂ ಮುನ್ನಾ ಸದರಿ ನೀರು ಕುಡಿಯಲು ಯೋಗ್ಯವಾಗಿರುವಂತೆ ನೀರಿನ ಸಂಸ್ಕರಣೆಯನ್ನು ಕಡ್ಡಾಯವಾಗಿ ಕೈಗೊಳ್ಳಲು ಮತ್ತು ಸದರಿ ಜಲ ಮೂಲಗಳು ಕಲುಷಿತವಾಗದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಮುಂದುವರೆದು, ಜಿಲ್ಲೆಯ ಸಾರ್ವಜನಿಕರಿಗೆ ಮನೆಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳು ಮತ್ತು ಮಳೆಗಾಲದಲ್ಲಿ ಹರಡಬಹುದಾದ ರೋಗಗಳ ಕುರಿತು ಅರಿವುಮೂಡಿಸಲು ನಿಯಮಾನುಸಾರ ಕ್ರಮವಹಿಸುವುದು. ತಪ್ಪಿದ್ದಲ್ಲಿ, ಮುಂದಿನ ಆಗುಹೋಗುಗಳಿಗೆ ಆಯಾ ಅಧಿಕಾರಿಗಳಿಗೆ ನೇರವಾಗಿ ಹೊಣೆಗಾರರನ್ನಾಗಿಸಿ ವಿಪತ್ತು ನಿರ್ವಹಣಾ ಕಾಯ್ದೆ 2005ರಡಿ ಶಿಸ್ತು ಕ್ರಮವಹಿಸಲಾಗುವುದು ಎಂದು ತಿಳಿಯುವುದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here