ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧದ ಮೈಸೂರು ಚಲೋ ಬೃಹತ್ ಪಾದಯಾತ್ರೆಯ ಉದ್ಘಾಟನೆಯು ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು, ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಅವರು, ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಶ್ರೀ ಹೆಚ್.ಡಿ ಕುಮಾರಸ್ವಾಮಿ ಅವರು, ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪನವರು, ವಿರೋಧ ಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು, ಶ್ರೀ ಡಿ.ವಿ.ಸದಾನಂದಗೌಡರು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿಗಳಾದ ಶ್ರೀ ಡಾ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು, ಸಹ ಉಸ್ತುವಾರಿಗಳಾದ ಶ್ರೀ ಸುಧಾಕರ್ ರೆಡ್ಡಿ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣ ಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಗಳಾದ ಶ್ರೀ ಗೋವಿಂದ ಕಾರಜೋಳ, ಶ್ರೀ ಡಾ.ಸಿ.ಎನ್.ಅಶ್ವಥ್ ನಾರಾಯಣ್, ಕೇಂದ್ರ ಸಚಿವರಾದ ಕು ಶೋಭಾ ಕರಂದ್ಲಾಜೆ ಅವರು, ಶ್ರೀ ವಿ. ಸೋಮಣ್ಣ ನವರು, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಶ್ರೀ ಜಿ ಟಿ ದೇವೇಗೌಡರು, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಶ್ರೀ ಸುರೇಶ್ ಬಾಬು, ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಸಂಸದರು, ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.