ರಾಮನಗರ:ಕೇಂದ್ರ ಎನ್‌ಡಿಎ ಸರ್ಕಾರವು ಕರ್ನಾಟಕಕ್ಕೆ ಮಾಡುತ್ತಿರುವ ಅನ್ಯಾಯ ವಿರುದ್ಧ ಹಾಗೂ ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರದ ಅವಧಿಯಲ್ಲಿನ ಭ್ರಷ್ಟಚಾರದ ವಿರುದ್ಧ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಜನಾಂದೋಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನರನ್ನು ಉದ್ದೇಶಿಸಿ ಸಚಿವ ಬೈರತಿ ಸುರೇಶ ಮಾತನಾಡಿದರು.
ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳನ್ನು ಗೆಲ್ಲಿಸಿಕೊಟ್ಟು ಆಶೀರ್ವಾದ ಮಾಡಿರುವ ಸರ್ಕಾರವನ್ನು, ಬಿಜೆಪಿಯವರು ರಾಜ್ಯಪಾಲರನ್ನು ಮುಂದಿಟ್ಟುಕೊಂಡು ಹೆದರಿಸುತ್ತಿದ್ದಾರೆ. ನಮ್ಮ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ್ದಲ್ಲದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಇದೆಲ್ಲವನ್ನು ಸಹಿಸಲಾಗದ ಬಿಜೆಪಿಯವರು ಪಿತೂರಿ ನಡೆಸಿ, ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ.
ಸರ್ಕಾರ ಅಸ್ಥಿತ್ವಕ್ಕೆ ಬಂದಾಗಿನಿಂದಲೂ ಬಿಜೆಪಿಯವರು ಷಡ್ಯಂತ್ರ ನಡೆಸುತ್ತಿದ್ದಾರೆ. ಭ್ರಷ್ಟ ಬಿಜೆಪಿ ನಾಯಕರನ್ನು ರಾಜ್ಯದ ಜನತೆ ಎಂದಿಗೂ ಒಪ್ಪುವುದಿಲ್ಲ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮುಂದಿನ ನಾಲ್ಕು ವರ್ಷವೂ ಸ್ವಚ್ಛ, ಜನಪರ ಆಡಳಿತ ನೀಡಲಿದೆ ಎಂದು ತಿಳಿಸಿದರು.