ಬೆಂಗಳೂರು:

ಮುಖ್ಯಮಂತ್ರಿ ಸಿದ್ದರಾಮಯ್ಯನವರು ತೈವಾನ್ ಮೂಲದ ಆಪಲ್ ಫೋನ್ ಕಂಪೆನಿ ಫಾಕ್ಸ್ಕಾನ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಅಧ್ಯಕ್ಷ ಯಂಗ್ ಲಿಯು ಅವರ ಜೊತೆ ಸಮಾಲೋಚನೆ ನಡೆಸಿ, ಸಾಂಸ್ಕೃತಿಕವಾಗಿ ಉನ್ನತ ಮೌಲ್ಯಗಳನ್ನು ಆಚರಿಸುತ್ತಿರುವ ರಾಜ್ಯದಲ್ಲಿ ಕೈಗಾರಿಕೆಗಳಿಗೆ ಅತ್ಯಗತ್ಯವಾದ ಕಾನೂನು – ಸುವ್ಯವಸ್ಥೆ ಉತ್ತಮವಾಗಿದೆ, ಫಾಕ್ಸ್ಕಾನ್ ಕಂಪನಿಗೆ ರಾಜ್ಯದಲ್ಲಿ ಕಾರ್ಯನಿರ್ವಹಿಸಲು ಅಗತ್ಯವಾದ ಎಲ್ಲಾ ರೀತಿಯ ಸಹಕಾರ, ನೆರವು ಒದಗಿಸಲಾಗುವುದು ಎಂಬ ಭರವಸೆ ನೀಡಿದರು.

ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ರವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ, ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್, ಮಾಹಿತಿ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಏಕ್ ರೂಪ್ ಕೌರ್ ಸೇರಿದಂತೆ ಕೈಗಾರಿಕೆ ಮತ್ತು ಐಟಿ ಬಿಟಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here