ಬೆಂಗಳೂರು:ಪ್ರಜಾತಾಂತ್ರಿಕವಾಗಿ ಚುನಾಯಿತವಾದ ಸರ್ಕಾರವನ್ನು ಅಪ್ರಜಾತಾಂತ್ರಿಕ ಮಾರ್ಗದಲ್ಲಿ ಅಸ್ಥಿರಗೊಳಿಸುವ ಕೇಂದ್ರ ಸರ್ಕಾರ ಮತ್ತು ರಾಜಭವನದ ಷಡ್ಯಂತ್ರಗಳನ್ನು ವಿರೋಧಿಸಿ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಜನಾರ್ದನ ರೆಡ್ಡಿ ಅವರ ವಿರುದ್ಧ ತನಿಖೆಗೆ, ಕ್ರಮಕ್ಕೆ ಅನುಮತಿ ನೀಡದ ರಾಜ್ಯಪಾಲರ ತಾರತಮ್ಯ ನೀತಿಯನ್ನು ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಾಲ್ಗೊಂಡಿದ್ದರು.