ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಿದರು.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಕುಡಿಯುವ ನೀರು ಮತ್ತು ಕೆರೆ ತುಂಬಿಸುವ ಈ ಯೋಜನೆಯಿಂದ ಲಕ್ಷಾಂತರ ಜನರ ಬದುಕು ಬದಲಾಗುವ ನಿರೀಕ್ಷೆಯಿದೆ.

ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಎನ್.ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿದಂತೆ ಹಲವು ಶಾಸಕರು, ಚುನಾಯಿತ ಪ್ರತಿನಿಧಿಗಳು, ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು.

LEAVE A REPLY

Please enter your comment!
Please enter your name here