ಬೆಂಗಳೂರು:ಜ್ಞಾನ ಭಾರತಿ ಮೆಟ್ರೋ ನಿಲ್ದಾಣದಲ್ಲಿ ಇಂದು ಮಧ್ಯಾಹ್ನ 2.20 ರ ಸುಮಾರಿಗೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪವಾಡ ಸದೃಶವಾಗಿ ಪಾರಾಗಿದ್ದಾನೆ. ವೈಟ್ ಫೀಲ್ಡ್ ಕಡೆಯಿಂದ ಕೆಂಗೇರಿ ಕಡೆಗೆ ಹೊರಟಿದ್ದ ಮೆಟ್ರೋ ರೈಲು ಜ್ಞಾನಭಾರತಿ ನಿಲ್ದಾಣಕ್ಕೆ ಬರುತ್ತಿದ್ದಂತೆ ಈ ವ್ಯಕ್ತಿ ಏಕಾಏಕಿ ಟ್ರ್ಯಾಕ್ ಗೆ ದುಮುಕಿದ. ರೈಲು ಹತ್ತು ಮೀಟರ್ ದೂರ ಕ್ರಮಿಸಿತಾದರೂ ಆ ವ್ಯಕ್ತಿ ರೈಲ್ವೆ ಟ್ರ್ಯಾಕ್ ನಡುವೆ ಸಿಲುಕಿದ ಕಾರಣ ಜೀವಕ್ಕೆ ತೊಂದರೆಯಾಗಿಲ್ಲ. ರೈಲ್ವೆ ಚಾಲಕರು ವೇಗವನ್ನು ಗಣನೀಯವಾಗಿ ತಗ್ಗಿಸಿದರು. ತಕ್ಷಣವೇ ರೈಲು ಸಂಚಾರ ಬಂದ್ ಮಾಡಿ ಈ ವ್ಯಕ್ತಿಯನ್ನು ರಕ್ಷಿಸಿ ಕರೆದೊಯ್ದರು.

LEAVE A REPLY

Please enter your comment!
Please enter your name here