ಬೆಂಗಳೂರು ನಗರ ಜಿಲ್ಲೆ, ಸೆಪ್ಟೆಂಬರ್ 27 : ಸರ್ವರಿಗೂ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪಾತ್ರ ಮಹತ್ವವಾದುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅವರು ತಿಳಿಸಿದರು.
ಇಂದು ಬೆಂಗಳೂರಿನ ಪ್ರಸ್ ಕ್ಲಬ್ ಆವರಣದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರವೇಶಾತಿಯ ಕುರಿತು ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತಾನಾಡಿದರು.
ಪ್ರಸ್ತುತ 65 ಕೋರ್ಸ್ ಗಳಿದ್ದು ಅದರಲ್ಲಿ 10 ಆನ್ ಲೈನ್ ಕೋಸ್‍ಗಳು ತರಬೇತಿಯ ಪ್ರವೇಶಾತಿಯನ್ನು ಜುಲೈ 22 ರಿಂದ ಆರಂಭಿಸಿಲಾಗಿದೆ. ತೃತೀಯ ಲಿಂಗದ ವಿದ್ಯಾರ್ಥಿಗಳಿಗೆ ಹಾಗೂ ದೃಷ್ಠಿಹೀನ ವಿದ್ಯಾರ್ಥಿಗಳಿಗೆ, ಪೂರ್ಣ ಶುಲ್ಕ ವಿನಾಯಿತಿ ನೀಡಲಾಗುವುದು. ಎಂದು ಮಾಹಿತಿ ನೀಡಿದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ 2024 -25 ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯಲ್ಲಿ ಯುಜಿಸಿ ಅನುಮೋದಿತ ಸ್ನಾತಕ/ ಸ್ನಾತಕೋತ್ತರ ಕೋರ್ಸ್‌ಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್.ಡಬ್ಲ್ಯು. ಬಿ.ಎಲ್.ಐ.ಎಸ್ಸಿ., ಬಿ.ಎಡ್. (ಸಿ.ಇ.ಟಿ. ಮುಖಾಂತರ) ಹಾಗೂ ಬಿ.ಎಸ್ಸಿ, ಎಂ.ಎ, ಎಂ.ಸಿ.ಜೆ, ಎಂ.ಕಾಂ., ಎಂ.ಎಲ್.ಐ.ಎಸ್ಸಿ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ, ಎಂ.ಎಸ್ಸಿ, ಎಂ.ಬಿ.ಎ., ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್, ಡಿಪ್ಲೋಮಾ ಪ್ರೋಗ್ರಾಮ್ಸ್, ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಗಳಿಗೆ ಪ್ರವೇಶಾತಿ ಪ್ರಕ್ರಿಯೆಗಳು ಪ್ರಾರಂಭಗೊಂಡಿರುತ್ತವೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರವೇಶಾತಿಯನ್ನು ಪಡೆಯಲು 18 ರಿಂದ 80ರ ವರೆಗೆ ವಯೋಮಿತಿ ನಿಗದಿಪಡಿಸಲಾಗಿದ್ದು, ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ, ಆಟೋ/ಕ್ಯಾಬ್ ಚಾಲಕರು ಮತ್ತು ಅವರ ಪತಿ/ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ, KSRTC/BMTC/NWKSRTC/KKRTC ನೌಕರರುಗಳಿಗೆ ಕ.ರಾ.ಮು.ವಿ.ಯು ಪ್ರವೇಶಾತಿಯಲ್ಲಿ 10 % ರಷ್ಟು ರಿಯಾಯಿತಿಯನ್ನು ನೀಡಲಾಗಿದೆ ಎಂದರು.
ಕರಾಮುವಿ ಬೆಂಗಳೂರಿನ 06 ಪ್ರಾದೇಶಿಕ ಕೇಂದ್ರಗಳಲ್ಲಿ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತಿದ್ದು, ಅಧಿಕೃತ ವೆಬ್‌ಸೈಟ್ www.ksoumysuru.ac.in KSOU Admission Portal ಮೂಲಕ ಅರ್ಜಿಗಳನ್ನು ಭರ್ತಿ ಮಾಡಬಹುದಾಗಿದೆ.
ರಾಜ್ಯಾದ್ಯಾಂತ 50ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳಿವೆ. ಕರ್ನಾಟಕದಾದ್ಯಂತ ವಿದ್ಯಾರ್ಥಿಗಳು/ಆಸಕ್ತರು ಹತ್ತಿರದ ಜಿಲ್ಲಾ ಪ್ರಾದೇಶಿಕ ಕೇಂದ್ರಗಳಿಗೂ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಡೀನ್ ಹಾಗೂ ಬೆಂಗಳೂರು ಪ್ರಾದೇಶಿಕ ವಿಭಾಗದ ನಿರ್ದೇಶಕರಾದ ಪ್ರೋ.ಎಂ. ರಾಮನಾಥಂ ನಾಯ್ಡು, ಕರಾಮುವಿ ವ್ಯವಸ್ಥಾಪನಾ ಮಂಡಳಿ ಸದ್ಯಸರು, ಬೆಂಗಳೂರು ಹಾಗೂ ಬೆಂಗಳೂರು ವಲಯ ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಪ್ರಾದೇಶಿಕ ಕೇಂದ್ರಗಳ ಪ್ರಾದೇಶಿಕ ನಿರ್ದೇಶಕರುಗಳು ಉಪಸ್ಥಿತರಿದ್ದರು.