ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದ್ದು,
ಸಂಜೆ, ರಾತ್ರಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಸ್ವಲ್ಪ ಜಾಸ್ತಿ ಇರಬಹುದು.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ. ಒಕ್ಟೊಬರ್ 17ರಿಂದ ಸಂಜೆ ಹಾಗೂ ರಾತ್ರಿಯ ಸಮಯದಲ್ಲಿ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಗುಡುಗು ಸಹಿತ ಸಹಿತ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಹಾಸನ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಗುಡುಗು ಸಾಧ್ಯತೆಯೂ ಇದೆ.
ಈಗಿನಂತೆ ಒಕ್ಟೊಬರ್ 17ರಿಂದ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಹಿಂಗಾರು ಮಳೆ ಆರಂಭವಾಗುವ ಸಾಧ್ಯತೆಗಳಿವೆ.

ಒಳನಾಡು : ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಗದಗ, ದಾವಣಗೆರೆ, ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಒಳನಾಡಿನ ಬೆಂಗಳೂರು ( ನಿನ್ನೆಯ ಮಹಾಮಳೆಯ ಮುನ್ಸೂಚನೆ ಇಲ್ಲವಾಗಿದೆ .) ಕಡಿಮೆ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ ಮಂಡ್ಯ, ರಾಮನಗರ ಜಿಲ್ಲೆಗಳ ಅಲ್ಲಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಅಕ್ಟೊಬರ್ 17ರಿಂದ ಸಂಜೆ ಹಾಗೂ ರಾತ್ರಿಯ ವೇಳೆ ಗುಡುಗು ಸಹಿತ ಹಿಂಗಾರು ಮಳೆ ಆರಂಭವಾಗುವ ಸಾಧ್ಯತೆಗಳಿವೆ.

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿರುವ ವಾಯುಭಾರ ಕುಸಿತವು ಒಕ್ಟೊಬರ್ 17ರಂದು ಅಲ್ಲೆ ದುರ್ಬಲಗೊಳ್ಳುವ ಲಕ್ಷಣಗಳಿದ್ದು, ಇದರ ಪ್ರಭಾವದಿಂದ ರಾಜ್ಯದಲ್ಲಿ ಹಿಂಗಾರು ಮಳೆ ಆರಂಭವಾಗಲಿದೆ. ಸುಮಾರು ಒಕ್ಟೊಬರ್ 24 ನಂತರ ಹಿಂಗಾರು ದುರ್ಬಲಗೊಳ್ಳುವ ಸಾಧ್ಯತೆಗಳಿದ್ದು, ಮುಂದಿನ ದಿನಗಳಲ್ಲಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಆಂದ್ರಾ, ತಮಿಳುನಾಡು ಕರಾವಳಿ ಕಡೆ ಸಾಗಿದರೆ ಮಾತ್ರ ಚುರುಕಾಗಬಹುದುಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here