ಶಾಕುಂತಲಾ ನಾಟಕ ಬರೆದ ಕಾಳಿದಾಸ ಕುರುಬ ಸಮುದಾಯದವರು. ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ರಾಮಾಯಣ ಬರೆದ ಮಹರ್ಷಿಯವರು ವಾಲ್ಮೀಕಿ ಸಮುದಾಯದವರು.
ದರೋಡೆ ಮಾಡ್ಕೊಂಡು ಓಡಾಡುತ್ತಿದ್ದ ವಾಲ್ಮೀಕಿಯವರು ರಾಮಾಯಣ ಬರೆಯಲು ಸಾಧ್ಯವಾ? ಎಂದು ಕತೆ ಕಟ್ಟಿಬಿಟ್ಟರು. ತಳ ಸಮುದಾಯಗಳು, ಶೂದ್ರರು ಶಿಕ್ಷಣ, ಸಂಸ್ಕೃತ ಕಲಿಯುವುದು ನಿಷಿದ್ಧವಾಗಿತ್ತು. ಇಂಥಾ ಹೊತ್ತಲ್ಲೇ ಸಂಸ್ಕೃತ ಕಲಿತು, ಶ್ಲೋಕಗಳ ಮೂಲಕ ಜಗತ್ಪ್ರಸಿದ್ಧ ರಾಮಾಯಣ ಮಹಾಕಾವ್ಯ ಬರೆದರಲ್ಲಾ ಇದು ಹೆಮ್ಮೆಯ ಮತ್ತು ಮಾದರಿ ಸಂಗತಿ.
ಶಿಕ್ಷಣ ಕಲಿಯುವ ಅವಕಾಶ ಸಿಕ್ಕಾಗ ಇವರೆಲ್ಲಾ ಕಲಿತರು, ಬರೆದರು. ಜಗತ್ತಿಗೇ ಪ್ರೇರಣೆ ಆದರು. ವಾಲ್ಮೀಕಿ ಅವರು ಸಮಪಾಲು, ಸಮಬಾಳು, ಸಮಾನ ಅವಕಾಶಗಳ ಬಗ್ಗೆ ಹೇಳಿದ್ದರು. ರಾಮಾಯಣದ ರಾಮರಾಜ್ಯ ಅಂದರೆ ಸಮಪಾಲಿನ ಸಮಾನ ಅವಕಾಶಗಳ ರಾಜ್ಯ ಎಂದರ್ಥ.
ರಾಮನ ಮಕ್ಕಳಾದ ಲವ ಕುಶರಿಗೆ ಆಶ್ರಯ ನೀಡಿ ಶಿಕ್ಷಣ ಕೊಟ್ಟಿದ್ದು ವಾಲ್ಮೀಕಿ ಮಹರ್ಷಿಗಳು. ವಾಲ್ಮೀಕಿ ವಿಶ್ವಮಾನವರಾಗಿದ್ದರು ಎನ್ನುವುದಕ್ಕೆ ಇದೊಂದು ಸಣ್ಣ ಉದಾಹರಣೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಹೇಳಿದರು.