ರಾಯಚೂರು,ಅ.19,:- ಸರ್ಕಾರಿ ಭೂಮಿ ಒತ್ತುವರಿ ತಡೆಯಲು ಗ್ರಾಮ ಲೆಕ್ಕಾಧಿಕಾರಿಗಳು ಮನಸ್ಸು ಮಾಡಿದರೆ ಮಾತ್ರ, ಸರ್ಕಾರಿ ಭೂಮಿ ರಕ್ಷಣೆ ಮಾಡಬಹುದಾಗಿದೆ ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಎ.ಪಾಟೀಲ್ ಅವರು ಹೇಳಿದರು.
ಅವರು ಅ.19ರ ಶನಿವಾರದಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯಗಳು ಬೆಂಗಳೂರು, ಕಂದಾಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾಡಳಿತ ರಾಯಚೂರು ಇವರ ಸಹಯೋಗದೊಂದಿಗೆ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬAಧಿಸಿದ ಕಾಯ್ದೆಗಳ ಬಗ್ಗೆ ಒಂದು ದಿನದ ಕಾರ್ಯಾಗಾರಕ್ಕೆ ಚಾಲನೆ ನೀಡಿ, ಮಾತನಾಡಿದರು.
ಕಂದಾಯ ಇಲಾಖೆಯು ಎಲ್ಲಾ ಇಲಾಖೆಗಳ ಮಾತೃ ಇಲಾಖೆಯಾಗಿದ್ದು, ಇಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳ ಮೇಲೆ ಹೆಚ್ಚಿನ ಜವಾಬ್ದಾರಿ ಇರುತ್ತದೆ. ಅದರಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ಸ್ಥಳೀಯ ಪೊಲೀಸರ ಪಾತ್ರ ಮಹತ್ವದಾಗಿದ್ದು, ಅವರು ಮನಸ್ಸು ಮಾಡಿದರೆ ಮಾತ್ರ ಸರ್ಕಾರದ ಭೂಮಿ ರಕ್ಷಣೆ ಮಾಡಬಹುದಾಗಿದೆ ಎಂದು ಹೇಳಿದರು.
ಸರ್ಕಾರಿ ಭೂಮಿ ಒತ್ತುವರಿಯಾದ ಸಮಯದಲ್ಲಿ ಕಂದಾಯ ಇಲಾಖೆಯವರೇ ದೂರು ಸಲ್ಲಿಸಬೇಕೆಂದು ಏನು ಇಲ್ಲ. ಸಾರ್ವಜನಿಕರು ಯಾರಾದ್ರೂ ದೂರು ದಾಖಲಿಸಬಹುದು. ನ್ಯಾಯಾಲಯದಲ್ಲಿ ಈ ಕುರಿತು ಸಾಕಷ್ಟು ಪ್ರಕರಣ ದಾಖಲಾಗಿದ್ದು, ಕಾನೂನಿನ ಕುರಿತು ಜನರಿಗೆ ಪೂರ್ಣ ಮಾಹಿತಿ ನೀಡಬೇಕಾಗಿದೆ ಎಂದು ಹೇಳಿದರು.
ಈ ಸಮಿತಿ ವತಿಯಿಂದ ಸರ್ಕಾರಿ ಒತ್ತುವರಿ ಜಾಗ ಕುರಿತು ವರದಿ ಸಲ್ಲಿಸುತ್ತದೆ. ಪ್ರಸ್ತುತ ದಿನದಲ್ಲಿ ಸ್ಮಶಾನಕ್ಕೆ ಸರ್ಕಾರದ ವತಿಯಿಂದ ಭೂಮಿ ನೀಡಲು ಭೂಮಿಯಿಲ್ಲದ ಪರಿಸ್ಥಿತಿ ಬಂದಿದೆ. ಸಂಬAಧಿಸಿದ ಅಧಿಕಾರಿಗಳು ಸರ್ಕಾರಿ ಭೂಮಿಯನ್ನು ಮೊದಲು ಸರ್ವೆ ಮಾಡಬೇಕು. ರಾಯಚೂರು ಜಿಲ್ಲೆಯ ವ್ಯಾಪ್ತಿಯ ಎಲ್ಲಾ ಸರ್ಕಾರಿ ಭೂಮಿಯನ್ನು ರಕ್ಷಿಸಿ, ತಪಿತಸ್ಥರಿಗೆ ಕಾನೂನು ಪ್ರಕಾರ ಶಿಕ್ಷೆ ಕೊಡಿಸಬೇಕೆಂದು ಹೇಳಿದರು.
ಈ ವೇಳೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಾರುತಿ ಎಸ್.ಭಗಡೆ ಅವರು ಮಾತನಾಡಿ, ಸರ್ಕಾರದ ಭೂಮಿ ಒತ್ತುವರಿ ಎಂಬುದು ಕೇವಲ ಜನಪ್ರತಿನಿಧಿಗಳಿಗೆ ಸೀಮಿತವಾಗಿಲ್ಲ. ಒತ್ತುವರಿ ಪ್ರಕ್ರಿಯೆಯಲ್ಲಿ ಕೆಲ ಸಾರ್ವಜನಿಕರು ಭಾಗಿಯಾಗುತ್ತಿದ್ದಾರೆ. ಬಸವಕಲ್ಯಾಣ ಕೋಟೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಅಕ್ರಮ ಕಟ್ಟಡಗಳು ಎದ್ದಿದ್ದು, ಈ ಕುರಿತು ಸರ್ಕಾರವು 45 ವರ್ಷಗಳಿಂದ ಹೋರಾಟ ಮಾಡುತ್ತಿದೆಂದು ಉದಾಹರಣೆಯಾಗಿ ಹೇಳಿದರು. ಅಲ್ಲದೆ ರಾಯಚೂರು ನಗರದ ಮಾವಿನಕೆರೆ ಭೂಮಿ ಒತ್ತುವರಿ ಕುರಿತು ನ್ಯಾಯಲಯವು ನಿರ್ದೇಶನ ನೀಡಿದ್ದು, ಕೂಡಲೇ ನ್ಯಾಯಾಲಯದ ನಿರ್ದೇಶನವನ್ನು ಪಾಲಿಸಿ, ಒತ್ತುವರಿಯಾದ ಭೂಮಿಯನ್ನು ವಶ ಪಡಿಸಿಕೊಳ್ಳಬೇಕೆಂದರು.
ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಮಾತನಾಡಿ, ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಕೋರ್ಟ್ ವತಿಯಿಂದ ಕಾರ್ಯಾಗಾರ ಮಾಡುತ್ತಿದ್ದು, ಈ ಕಾರ್ಯಾಗಾರ ಭಾರಿ ಅನುಕೂಲವಾಗಿದೆ. ಜಿಲ್ಲೆಯ ಎಲ್ಲಾ ಅಧಿಕಾರಿಗಳು ಉತ್ತಮ ರೀತಿ ಕಾರ್ಯನಿರ್ವಹಿಸುತ್ತಿದ್ದು, ಆದರೆ ಮಾಹಿತಿ ಕೊರತೆ ಇದೆ. ಮುಂದಿನ ದಿನಗಳಲ್ಲಿ ಮಾಹಿತಿ ಪಡೆದುಕೊಂಡು ಉತ್ತಮ ಫಲಿತಾಂಶವನ್ನು ನೀಡಲಿದೆ. ಮಾರ್ಗದರ್ಶನ ಇದ್ದರೆ ಎಂತಹ ದೊಡ್ಡ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದಾಗಿದೆ. ನ್ಯಾಯಾಧೀಶರ ಮಾರ್ಗದರ್ಶನವು ಜಿಲ್ಲೆಯ ಅಧಿಕಾರಿಗಳ ಮೇಲೆ ಇರಬೇಕು. ತರಬೇತಿಯ ಲಾಭವನ್ನು ಎಲ್ಲಾ ಅಧಿಕಾರಿಗಳು ಪಡೆದು ಕೆಲಸ ಮಾಡಬೇಕೆಂದು ಹೇಳಿದರು.
ಜಿಲ್ಲೆಯಲ್ಲಿ ಬೆಲೆ ಬಾಳುವ ಭೂಮಿಯನ್ನು ಗುರುತಿಸಬೇಕು. ಒಂದು ವೇಳೆ ಒತ್ತುವರಿಯಾಗಿದ್ದರೆ. ಕೂಡಲೇ ವಶಪಡಿಸಿಕೊಳ್ಳಬೇಕು. ಇಂತಹ ಸಂದರ್ಭದಲ್ಲಿ ಕೆಲ ಒತ್ತಡಗಳು ಬರುತ್ತವೆ. ಆ ಒತ್ತಡಗಳಿಗೆ ಮಣಿuಟಿಜeಜಿiಟಿeಜಯದೆ ಅಧಿಕಾರಿಗಳು ಕಾರ್ಯನಿರ್ವಹಿಸುವ ಮೂಲಕ ಭೂಗಳ್ಳರಿಗೆ ಶಿಕ್ಷೆ ಕೊಡಿಸಬೇಕೆಂದು ಹೇಳಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಕಂದಾಯ ಸದಸ್ಯರಾದ ಎಸ್.ಪಾಲಯ್ಯ, ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಕಂದಾಯ ಸದಸ್ಯರಾದ ಕೆ.ಹೆಚ್. ಅಶ್ವತ್ಥ ನಾರಾಯಣ ಗೌಡ, ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ವಿಲೇಖನಾಧಿಕಾರಿಗಳಾದ ಹೆಚ್.ಕೆ.ನವೀನ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ಹೆಚ್.ಎ.ಸ್ವಾತಿಕ್, ಅಪರ ಜಿಲ್ಲಾಧಿಕಾರಿ ಶಿವಾನಂದ, ರಾಯಚೂರು ಸಹಾಯಕ ಆಯುಕ್ತಾರದ ಗಜಾನನ ಬಾಲೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಶಿವುಕುಮಾರ್ ಆರ್. ಸೇರಿದಂತೆ ಇತರರು ಇದ್ದರು. ಕಾರ್ಯಾಗಾರದಲ್ಲಿ 12 ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳು ಇದ್ದರು.