ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 501.81 ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಸಚಿವರುಗಳಾದ ಕೆ.ವೆಂಕಟೇಶ್, ರಹೀಂಖಾನ್, ಬೋಸ್ ರಾಜ್,
ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್,
ವಿಧಾನಸಭೆ ಮತ್ತು ವಿಧಾನ ಪರಿಷತ್ ಶಾಸಕರುಗಳಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ದರ್ಶನ್ ದ್ರುವನಾರಾಯಣ್, ತಿಮ್ಮಯ್ಯ, ವರುಣಾ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರು, ಉಪಾಧ್ಯಕ್ಷರುಗಳು, ನಗರಸಭೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳು ಸೇರಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.