ಬೆಂಗಳೂರು: ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರನ್ನು ಹನಿಟ್ರಾಪ್ ಬಲೆಗೆ ಕೆಡವಲು ಹೋಗಿ ಸಿಕ್ಕಿಬಿದ್ದ ನಲಪಾಡ್ ಬ್ರಿಗೇಡ್‌ನ ಕಲಬುರಗಿ ಘಟಕದ ಅಧ್ಯ- ಕ್ಷೆ ಮಂಜುಳಾ ಪಾಟೀಲ ಹಾಗೂ ಆಕೆಯ ಪತಿ ಶಿವರಾಜ್ ಪಾಟೀಲ್ ಮಾಜಿ ಸಚಿವರು ಮಾತ್ರ ಅಲ್ಲ, ಇನ್ನು ಹಲವರನ್ನು ಖೆಡ್ಡಾಗೆ ಕೇಡುವಿದ ಮಾಹಿತಿ ಆಕೆಯ ಮೊಬೈಲ್‌ನಲ್ಲಿ ಪತ್ತೆಯಾಗಿದೆ.
ಆರೋಪಿ ಮಂಜುಳಾ ಪಾಟೀಲ್ ಬ್ಯಾಗ್‌ನಲ್ಲಿ 6 ಮೊಬೈಲ್‌ಗಳು ಪತ್ತೆಯಾಗಿದ್ದು, ಅವುಗಳನ್ನು ಜಪ್ತಿ ಮಾಡಿ ಪರಿಶೀಲನೆ ಮಾಡಿದಾಗ ಬರೋಬ್ಬರಿ ಎಂಟು ಜನರ ಖಾಸಗಿ ವಿಡಿಯೋಗಳು ಪತ್ತೆಯಾಗಿವೆ. ಮೊಬೈಲ್ ನಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ, ಪೊಲೀಸ್ ಅಧಿಕಾರಿ, ಪಿಡಬ್ಲ್ಯುಡಿ ಅಧಿಕಾರಿ ಸೇರಿ ಎಂಟು ಜನರ ವಿಡಿಯೋಗಳು ಪತ್ತೆಯಾಗಿದ್ದು, ಈ ಬಗ್ಗೆ ಸಿಸಿಬಿ ಪೊಲೀಸರು ಒಂದೊಂದಾಗಿ ಪರಿಶೀಲನೆ ನಡೆಸುತ್ತಿದ್ದಾರೆ.
ಹಲವು ವರ್ಷಗಳಿಂದ ಕಾಂಗ್ರೆಸ್‌ನಲ್ಲಿ ಸಕ್ರಿಯವಾಗಿದ್ದ ಮಂಜುಳಾ, ಜಿಲ್ಲೆಯ ಮಹಮ್ಮದ್ ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಾಗಿದ್ದಳು. ಪಕ್ಷದಲ್ಲಿದ್ದ ಕಾರಣ ಮಾಲೀಕಯ್ಯಗೆ ಆಕೆಯ ಪರಿಚಯವಾಗಿತ್ತು. ಬಳಿಕ ಇಬ್ಬರೂ ನಿತ್ಯ ಮೊಬೈಲ್‌ನಲ್ಲಿ
ಸಲುಗೆಯಲ್ಲಿ ಮಾತನಾಡುತ್ತಿದ್ದರು. ಈ ನಡುವೆ ವಿಡಿಯೋ ಕಾಲ್‌ಗಳನ್ನು ರೆಕಾರ್ಡ್ ಮಾಡಿಕೊಂಡಿದ್ದ ಆಕೆ, ಬಳಿಕ ಇವುಗಳನ್ನು ಮುಂದಿಟ್ಟು ಹಣಕ್ಕೆ ಬ್ಲ್ಯಾಕ್ ಮಾಡಲಾರಂಭಿಸಿದ್ದಳು. ಮೇಲ್
2 ದಿನ ಹಿಂದೆ ಬೆಂಗಳೂರಿನಲ್ಲಿ ನೆಲೆಸಿರುವ ಮಾಲೀಕಯ್ಯ ಪುತ್ರ ರಿತೀಶ್ ಭೇಟಿಯಾಗಿ ಡೀಲ್ ನಡೆಸಲು ಮಂಜುಳಾ ದಂಪತಿ ಮುಂದಾಗಿದ್ದರು. ಬಳಿಕ ಈ ಬಗ್ಗೆ ರಿತೇಶ್ ನೀಡಿದ್ದ ದೂರಿನ ಆಧಾರದಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಕರಣದ ಸಂಬಂಧ ಗುತ್ತೇದಾರ್ ಅವರ ಮಾಲೀಕಯ್ಯ ಪುತ್ರ 2 ಗುತ್ತೇದಾರ್ ಅವರು ನೀಡಿದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿ ಗರುಡಾ ಮಾಲ್ ಬಳಿ ಆರೋಪಿಗಳನ್ನು
2 ಬಂಧಿಸಲಾಗಿದೆ. ಬಂಧಿತರನ್ನು ವೈದ್ಯಕೀಯ
ಪರೀ-
- ಕೈಗೆ ಒಳಪಡಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಚ ನ್ಯಾಯಾಲಯವು ಆರೋಪಿಗಳನ್ನು ಎಂಟು ದಿನ ಪೊಲೀಸ್ – ಕಸ್ಟಡಿಗೆ ನೀಡಿ ಆದೇಶಿಸಿದೆ.
ಆರೋಪಿಗಳನ್ನು ವಿಚಾರಣೆ ನಡೆಸಿ ಇನ್ನಷ್ಟು ಮಾಹಿತಿ ಕಲೆ ಹಾಕಲಾಗುವುದು ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
- ಅಕ್ಟೋಬರ್ 21ರಂದು ರಿತೇಶ್ ಅವರಿಗೆ ಕರೆ ಮಾಡಿದ್ದ
5 ಆರೋಪಿ ಮಂಜುಳಾ, ತಾನು ನಲಪಾಡ್ ಬ್ರಿಗೇಡ್ ಅಧ್ಯಕ್ಷೆ
- ಎಂದು ಪರಿಚಯಿಸಿಕೊಂಡಿದ್ದರು. ಮಾಲೀಕಯ್ಯ ಗುತ್ತೇದಾರ್
- ಅವರು ತನಗೆ ನಿಂದನೆಯ ಸಂದೇಶ ಕಳುಹಿಸುತ್ತಿದ್ದಾರೆ. ಈ
ಸಂಬಂಧ ತಮ್ಮೊಂದಿಗೆ ಚರ್ಚಿಸಬೇಕೆಂದು ಕೇಳಿಕೊಂಡಿದ್ದರು.
- ನಂತರ, ಕೊಡಿಗೇಹಳ್ಳಿಯ ಸ್ವಾತಿ ಗಾರ್ಡೆನಿಯಾ ಹೋಟೆಲ್‌ನಲ್ಲಿ
8 ರಿತೇಶ್ ಅವರನ್ನು ಆರೋಪಿಗಳು ಭೇಟಿ ಮಾಡಿದ್ದರು ಎಂದು
ಈ ಪೊಲೀಸರು ಹೇಳಿದರು.
- ಹಣಕ್ಕೆ ಬೇಡಿಕೆ:
ಮಾಲೀಕಯ್ಯ ಅವರ ವಿರುದ್ಧ ಪೊಲೀಸರಿಗೆ ಯಾವುದೇ • ದೂರು ನೀಡದಿರಲು ಹಾಗೂ ಮಾಧ್ಯಮಗಳಿಗೆ ಮಾಹಿತಿ
2 ನೀಡದಿರಲು 20 ಲಕ್ಷ ನೀಡುವಂತೆ ಬೇಡಿಕೆ ಇಟ್ಟಿದ್ದರು. 5 ಅಕ್ಟೋಬರ್ 23 ಹಾಗೂ 24ರಂದು ಪದೇ ಪದೇ ವಾಟ್ಸಪ್
- ಕರೆ ಮಾಡಿ ಹಣ ನೀಡಿದರೆ ನಿಂದನೆ ಸಂದೇಶಗಳನ್ನು
ಈ ಡಿಲಿಟ್ ಮಾಡುತ್ತೇವೆ. ಇಲ್ಲದಿದ್ದರೆ ಬಹಿರಂಗ ಪಡಿಸುವುದಾಗಿ
2 ಆರೋಪಿಗಳು ಬೇಡಿಕೆ ಇಟ್ಟಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.