ಬೆಂಗಳೂರು:ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (ಎಸ್ಟಿಪಿಐ) 27ನೇ ಆವೃತ್ತಿಯ ಬೆಂಗಳೂರು ಟೆಕ್ ಶೃಂಗಸಭೆಯನ್ನು ನವೆಂಬರ್ 19 ರಿಂದ 21ರ ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ʼಅನಿಯಮಿತʼ ಎಂಬ ಪರಿಕಲ್ಪನೆ ಅಡಿಯಲ್ಲಿ ಟೆಕ್ ಶೃಂಗಸಭೆ ಆಯೋಜಿಸಲಾಗಿದೆ. ಸ್ಟಾರ್ಟ್ಅಪ್ಗಳ ಸರ್ವತೋಮುಖ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ಜಾಗತಿಕ ಪಾಲುದಾರಿಕೆಗೆ ಆದ್ಯತೆ ನೀಡಲಾಗುತ್ತಿದೆ. ತಾಂತ್ರಿಕ ಉತ್ಕೃಷ್ಟತೆ, ನಾವೀನ್ಯತೆ ಮತ್ತು ಬೆಳವಣಿಗೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲೊದೆ. ನವೆಂಬರ್ 19 ರಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ .