ಹಿಂದಿನ ಅವಧಿಯಲ್ಲಿ ಕೇಂದ್ರದ ಎನ್ ಡಿಎ ಸರ್ಕಾರ ಕೃಷಿ ಕಾಯ್ದೆಗಳ ತಿದ್ದುಪಡಿಗೆ ಮುಂದಾದಾಗ ಅದನ್ನ ವಿರೋಧಿಸಿ, ಬೀದಿ ರಂಪಾಟ ಮಾಡಿ, ತನ್ನ ರಾಜಕೀಯ ತೆವಲಿಗೆ ಸ್ಥಾಪಿತವಾದ ಹಿತಾಸಕ್ತಿಗಳ ರಕ್ಷಣೆ ಮಾಡಿದ್ದ ಕಾಂಗ್ರೆಸ್ ಪಕ್ಷ, ಈಗ ಅದೇ ಮೂರು ಕೃಷಿ ಕಾಯ್ದೆಗಳ ಅನ್ವಯ ರೈತರ ಆದಾಯ ಹೆಚ್ಚಿಸಲು ಶಿಫಾರಸು ನೀಡಿ ಎಂದು ಕೃಷಿ ಬೆಲೆ ಆಯೋಗಕ್ಕೆ ಸಿಎಂ ಸಿದ್ದರಾಮಯ್ಯನವರ ಸರ್ಕಾರ ಸೂಚನೆ ನೀಡಿದೆ.
ತನ್ನ ರಾಜಕೀಯ ಲಾಭಕ್ಕಾಗಿ ಅನ್ನದಾತರ ಹಿತಾಸಕ್ತಿಯನ್ನು ಬಲಿಕೊಟ್ಟು, ಪಟ್ಟಭದ್ರ ಹಿತಾಸಕ್ತಿಗಳ ಜೊತೆ ಕೈಜೋಡಿಸಿದ್ದ ಕಾಂಗ್ರೆಸ್ ಪಕ್ಷದ ಅಸಲಿ ಬಣ್ಣ ಈಗ ಬಯಲಾಗಿದೆ.