ಬೆಂಗಳೂರು:ಗ್ರೇಟರ್ ಬೆಂಗಳೂರು ಪ್ರದೇಶ ಅಭಿವೃದ್ಧಿಯ ಯೋಜನೆಯ ಬಗ್ಗೆ ಕರ್ನಾಟಕ ವಿಧಾನ ಮಂಡಲದ ಜಂಟಿ ಪರಿಶೀಲನ ಸಮಿತಿ ವತಿಯಿಂದ ದಿನಾಂಕ 11-02-2025 ಮಂಗಳವಾರ ಮಧ್ಯಾಹ್ನ 03:00 ಗಂಟೆಯಿಂದ – ಸಂಜೆ 05:00 ಗಂಟೆಯವರೆಗೆ ಡಾ.ಎಚ್. ನರಸಿಂಹಯ್ಯ ಸಭಾಂಗಣ, ಜ್ಞಾನಭಾರತಿ ಕ್ಯಾಂಪಸ್ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ರಾಜರಾಜೇಶ್ವರಿ ನಗರ ವಲಯ ಮತ್ತು ಪಶ್ಚಿಮ ವಲಯ ವ್ಯಾಪ್ತಿಯಲ್ಲಿರುವ ಯಶವಂತಪುರ ವಿಧಾನಸಭಾ ಕ್ಷೇತ್ರದ 08 ಬಿಬಿಎಂಪಿ ವಾರ್ಡ್ ಹಾಗೂ 17 ಗ್ರಾಮ ಪಂಚಾಯಿತಿಗೆ ಸಂಬಂಧಿಸಿದಂತೆ ಸಾರ್ವಜನಿಕರು & ಜನಪ್ರತಿನಿಧಿಗಳಿಂದ ಯಾವುದೇ ಸಲಹೆ ಸೂಚನೆಗಳಿದ್ದರೆ ನೇರವಾಗಿ ಸಾರ್ವಜನಿಕರು ಸಮಿತಿಯ ಮುಂದೆ ತಮ್ಮ ಅಭಿಪ್ರಾಯಗಳನ್ನು ತಿಳಿಸಬಹುದಾಗಿದೆ.
ಯಶವಂತಪುರ ವಿಧಾನಸಭಾ ಕ್ಷೇತ್ರ ಬಿಬಿಎಂಪಿ ವಾರ್ಡ್ ವ್ಯಾಪ್ತಿಯ ಜನಪ್ರತಿನಿಧಿಗಳು, ಮುಖಂಡರುಗಳು,17 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಕಡ್ಡಾಯವಾಗಿ ಸಭೆಯಲ್ಲಿ ಪಾಲ್ಗೊಳ್ಳಬೇಕಾಗಿ ವಿನಂತಿಸಿಕೊಳ್ಳುತ್ತೇವೆ ಹಾಗೂ ಬ್ಲಾಕ್ ಅಧ್ಯಕ್ಷರು, ವಾರ್ಡ್ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಭೆಯಲ್ಲಿ ನಮ್ಮೊಂದಿಗೆ ಭಾಗವಹಿಸಬೇಕೆಂದು ಮಾಜಿ ಸಚಿವ ಹಾಗೂ ಹಾಲಿ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ
ಎಸ್ ಟಿ ಸೋಮಶೇಖರ್ ಗೌಡ ರವರು ವಿನಂತಿಸಿದ್ದಾರೆ.