ವಿಜಯಪುರ: ವಿಜಯಪುರ ನಗರದ ಹಿರಿಯರು ಹಾಗೂ ಸಮಾಜಸೇವಕರಾದ ಶ್ರೀ ವಿ ಎನ್ ಬಿರಾದರ್ ಹಾಗೂ ಶ್ರೀ ಆರ್ ಜಿ ಯರನಾಳ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಂ.ಬಿ.ಪಾಟೀಲ್ ರನ್ನು ಭೇಟಿಮಾಡಿ ವಿಜಯಪುರ ಕೇಂದ್ರ ಬಸ್ ನಿಲ್ದಾಣದ ಆವರಣದಲ್ಲಿ ರಾಣಿ ಚೆನ್ನಮ್ಮ ಪುತ್ಥಳಿ ನಿರ್ಮಾಣ ಸಂಬಂಧ ಚರ್ಚಿಸಿ ಮನವಿ ಮಾಡಿದರು.ಈ ಸಂದರ್ಭದಲ್ಲಿ ಸಚಿವರು ಮಾತನಾಡಿ

“ಈ ಹಿಂದೆ ಜಲಸಂಪನ್ಮೂಲ ಖಾತೆ ಸಚಿವನಾಗಿದ್ದಾಗ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಚೆನ್ನಮ್ಮ ಪುತ್ಥಳಿ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗಿತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಎಂ.ಬಿ.ಪಾಟೀಲರು ತಿಳಿಸಿದ್ದಾರೆ. ಹಾಗೂ ಸಮುದಾಯ ಭವನದ ನಿರ್ಮಾಣಕ್ಕೆ ಅಗತ್ಯದ ಆರ್ಥಿಕ ನೆರವು ಒದಗಿಸಲಾಗಿತ್ತು” ಎಂಬ ಸಂಗತಿ ತಿಳಿಸಿ ಪುತ್ಥಳಿ ನಿರ್ಮಾಣಕ್ಕೆ ನೆರವು ಕೋರಿದರು.

ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರು ಸಮಸ್ತ ಕನ್ನಡಿಗರ ಅಸ್ಮಿತೆ, ಪುತ್ಥಳಿ ನಿರ್ಮಾಣಕ್ಕೆ ಅಗತ್ಯವಾದ ರೂ. 50 ಲಕ್ಷವನ್ನು ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರುಗಳಿಗೆ ರೂ. 25 ಲಕ್ಷ ಒದಗಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು. ಈ ಮಹಾನ್ ತಾಯಿ ರಾಣಿ ಚೆನ್ನಮ್ಮ ಹೆಸರನ್ನು ವಿಜಯಪುರ ಬಸ್ ನಿಲ್ದಾಣಕ್ಕೆ ಇರಿಸುವ ಸಂಬಂಧ ಸಾರಿಗೆ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ಅವರೊಂದಿಗೆ ಚರ್ಚಿಸಲಾಗುವುದು. ನಿರ್ಮಾಣ ಕಾರ್ಯ ಪೂರ್ಣಗೊಂಡ ನಂತರ ಪುತ್ಥಳಿ ಲೋಕಾರ್ಪಣೆಯ ಕಾರ್ಯಕ್ಕೆ ಮಾನ್ಯ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗುವುದು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here