ವಿಜಯಪುರ : ಜಿಲ್ಲೆಯಲ್ಲಿ ಕಳೆದ ಒಂದು ದಶಕದಿಂದ ಕಲ್ಯಾಣ ಕರ್ನಾಟಕ ಮೀಸಲಾತಿ ನೀಡದೆ ಅನ್ಯಾಯ ಎಸಗಿರುವ ಸರಕಾರದ ವಿರುದ್ಧ ನಿರಂತರವಾಗಿ ಜಿಲ್ಲೆಯ ಜನ ಸಂಘ-ಸAಸ್ಥೆಗಳು ಹೋರಾಟ ಮಾಡುತ್ತ ಜಿಲ್ಲೆಗೆ ತಪ್ಪಿ ಹೋಗಿರುವ 371ಜೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿವೆ. ಕಳೆದ ಲೋಕ ಸಭಾ ಚುನಾವಣೆ ಸಂದರ್ಭದಲ್ಲಿ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲರು 371 ಜೆ ಮೀಸಲಾತಿ ನೀಡುವಂತೆ ಸರಕಾರಕ್ಕೆ ಆಗ್ರಹಿಸಿದ್ದರು. ಜೊತೆಗೆ ಕಾಂಗ್ರೆಸ್ ಪಕ್ಷದವರು ತಮ್ಮ ಲೋಕ ಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಜಿಲ್ಲೆಗೆ ಕಲ್ಯಾಣ ಕರ್ನಾಟಕ ಮೀಸಲಾತಿ ನೀಡುವ ಭರವಸೆ ನೀಡಿದ್ದರು. ಆದರೆ ಚುನಾವಣೆ ಮುಗಿದ ನಂತರ ಮೀಸಲಾತಿ ನೀಡುವ ಬಗ್ಗೆ ಯಾರೊಬ್ಬರೂ ಮಾತನಾಡದೆ ಮೌನಿಬಾಬಾಗಳಾಗಿದ್ದರು. ಈಗ ನಡೆಯುತ್ತಿರುವ ಅಧಿವೇಶನದಲ್ಲಿ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲರು 371 ಜೆ ಮೀಸಲಾತಿ ನೀಡುವಂತೆ ಸರಕಾರದ ಗಮನ ಸೆಳೆಯುವ ಬದಲಿಗೆ ಇಂಡಿಯನ್ನು ಪ್ರತ್ಯೇಕ ಜಿಲ್ಲೆ ಮಾಡುವಂತೆ ಸರಕಾರಕ್ಕೆ ಒತ್ತಾಯಿಸಿದ್ದಾರೆ. ನಾವು ಇಂಡಿ ಜಿಲ್ಲೆ ಯಾಗುವುದನ್ನು ವಿರೋಧಿಸುವುದಿಲ್ಲ. ಬದಲಿಗೆ ಶಾಸಕರ ಮೇಲೆ ಇಂಡಿ ಮತ್ತು ಜಿಲ್ಲೆಯ ಜನ 371 ಜೆ ಮೀಸಲಾತಿ ವಿಷಯದಲ್ಲಿ ಇಟ್ಟಿರುವ ಭರವಸೆ ಹುಸಿಗೊಳಿಸಿದ್ದಾರೆ. 371 ಜೆ ಮೀಸಲಾತಿ ಒದಗಿಸುವ ವಿಷಯದಲ್ಲಿ ಶಾಸಕರು ಹಿಂದೆ ಸರಿದಿದ್ದು ಖಂಡನೀಯವಾಗಿದೆ. ಶಾಸಕರ ಈ ನಿರ್ಧಾರ ಶಿಕ್ಷಣ ಮತ್ತು ಉದ್ಯೋಗದಲ್ಲಿನ ಮೀಸಲಾತಿಗಾಗಿ ಜಾತಕ ಪಕ್ಷಿಯಂತೆ ಕಾಯುತ್ತಿರುವ ಜಿಲ್ಲೆಯ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಯುವ ಜನರಿಗೆ ನಿರಾಸೆಯುಂಟಾಗಿದೆ ಎಂದು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೊತೆಗೆ ಜಿಲ್ಲೆಯನ್ನು ಪ್ರತಿನಿಧಿಸುವ ಎಲ್ಲ ಶಾಸಕರು ಮತ್ತು ವಿಧಾನ ಪರಿಷತ್ತಿನ ಸದಸ್ಯರು 371 ಜೆ ಮೀಸಲಾತಿ ಬಗ್ಗೆ ಧ್ವನಿ ಎತ್ತದೆ ಜಿಲ್ಲೆಯ ಜನರಿಗೆ ದ್ರೋಹ ಬಗೆಯುತ್ತಿದ್ದಾರೆ ಕೂಡಲೇ ಈ ಅಧಿವೇಶನದಲ್ಲಿ ಸರಕಾರದ ಗಮನ ಸೆಳೆದು ರಾಜಕೀಯ ಅಧಿಕಾರ ನೀಡಿದ ಜಿಲ್ಲೆಯ ಜನರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here