ಬೆಂಗಳೂರು, : ಕರ್ನಾಟಕ ಬಿಜೆಪಿಯಲ್ಲಿ (Karnataka BJP) ಬಣ ಬಡಿದಾಟಕ್ಕೆ ಬ್ರೇಕ್ ಹಾಕಲು ಹೈಕಮಾಂಡ್ ಮುಂದಾಗಿದೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ (show-cause notice )ನೀಡಿತ್ತು, ಇದರ ಬೆನ್ನಲ್ಲೇ ಇದೀಗ ಮೂವರು ಶಾಸಕರು ಹಾಗೂ ಇಬ್ಬರು ಮಾಜಿ ಸಚಿವರಿಗೆ ಶೋಕಾಸ್​ ನೋಟಿಸ್ ನೀಡಿದೆ. ಪಕ್ಷದ ಆಂತರಿಕ ವಿಚಾರ ಸಾರ್ವಜನಿಕ ವೇದಿಕೆಯಲ್ಲಿ ಚರ್ಚೆ ಮಾಡಿದ ಆರೋಪದ ಮೇಲೆ ಶಾಸಕರಾದ ಎಸ್.ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ್ ಹಾಗೂ ಬಿ.ಪಿ.ಹರೀಶ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಇದರ ಜೊತೆಗೆ ಯಡಿಯೂರಪ್ಪನವರ ಆಪ್ತರಾದ ಮಾಜಿ ಸಚಿವರಾದ ರೇಣುಕಾಚಾರ್ಯ ಮತ್ತು ಕಟ್ಟಾ ಸುಬ್ರಹ್ಮಣ್ಯ ನಾಯ್ಡುಗೆ ಶೋಕಾಸ್ ನೋಟಿಸ್‌ ಜಾರಿ ಮಾಡಲಾಗಿದೆ.

LEAVE A REPLY

Please enter your comment!
Please enter your name here