ಇಂಡಿ. ಇಂಡಿ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ಶ್ರೀ ಗೈಬಿಪೀರ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಏಪ್ರಿಲ್ 16ರಂದು ಮೂರನೇ ವರ್ಷದ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.ರಕ್ತದಾನ ಶಿಬಿರಕ್ಕೆ ಈಗಾಗಲೇ 100 ಜನರು ಹೆಸರು ನೊಂದಾಯಿಸಿದ್ದು ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಬಿಪಿ, ಶುಗರ್ ಹಾಗೂ ಕಣ್ಣುಗಳ ತಪಾಸಣೆಯನ್ನು ಮಾಡಲಾಗುವುದು. ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಾತ್ರಾ ಸಮಿತಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here