ವಿಜಯನಗರ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ವಿಜಯನಗರ ಜಿಲ್ಲೆಗೆ ಪ್ರತ್ಯೇಕ ಮೆಗಾ ಡೈರಿ ಮತ್ತು ಆಡಳಿತ ಕಚೇರಿ ಮಾಡಬೇಕೆಂದು ಸುಮಾರು 3000ಕ್ಕೂ ಅಧಿಕ ಹಾಲು ಉತ್ಪಾದಕರು ಪ್ರತಿಭಟನೆಯನ್ನು ಮಾಡಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಎಂ ಬಸವರಾಜ್ ಜಿಲ್ಲಾಧ್ಯಕ್ಷರು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಹಿತರಕ್ಷಣ ಸಮಿತಿ ಮಾತನಾಡಿ ವಿಜಯನಗರ ಜಿಲ್ಲೆಗೆ ಪ್ರತ್ಯೇಕ ಒಕ್ಕೂಟ ಮತ್ತು ಆಡಳಿತ ಕಚೇರಿ ಸ್ಥಾಪನೆ ಆಗುವವರೆಗೂ ನಾವು ಹೋರಾಟವನ್ನು ನಿಲ್ಲಿಸುವುದಿಲ್ಲ ಒಕ್ಕೂಟ ಮತ್ತು ಮೆಗಾ ಡೇರಿ ವಿಜಯನಗರ ಜಿಲ್ಲೆಯಲ್ಲಿ ಸ್ಥಾಪನೆ ಆಗದಿದ್ದರೆ ನಾವು ಮುಂದಿನ ದಿನಗಳಲ್ಲಿ ಹಾಲು ಕಳಿಸುವುದೇ ನಿಲ್ಲಿಸುತ್ತೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಕಿಸಾನ್ ಜಾಗೃತಿ ಸಂಘದ ರಾಜ್ಯಾಧ್ಯಕ್ಷರಾದ ಎಂ ಪ್ರಕಾಶ್ ಜಿಲ್ಲಾಧ್ಯಕ್ಷರು ಜಿಲ್ಲಾ ಉಪಾಧ್ಯಕ್ಷರು ಹಾಗೂ ವಿವಿಧ ಗ್ರಾಮ ಘಟಕಗಳ ಅಧ್ಯಕ್ಷರು ರಾಯಚೂರು ಬಳ್ಳಾರಿ ಕೊಪ್ಪಳ ಹಾಲು ಒಕ್ಕೂಟದ ನಿರ್ದೇಶಕರಾದ ಹೆಚ್ಚು ಮರಳ ಸಿದ್ದಪ್ಪ ಶ್ರೀಕಾಂತಪ್ಪ ಐಗೋಳ ಚಿದಾನಂದ ಹಡಗಲಿ ಸುಮಾರು 3000 ಸಂಖ್ಯೆಯಲ್ಲಿ ಹಾಲು ಉತ್ಪಾದಕರು ಸೇರಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯ ಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
(ಮಹದೇವ್ ವರದಿಗಾರರು ಕೂಡ್ಲಿಗಿ)

LEAVE A REPLY

Please enter your comment!
Please enter your name here