ಬಳ್ಳಾರಿ,ಮೇ 02:
ನ್ಯಾ.ಡಾ.ಹೆಚ್.ಎನ್. ನಾಗಮೋಹನ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯಯು ಜಿಲ್ಲೆಯಲ್ಲಿ ಮೇ 05 ರಿಂದ 23 ರವರೆಗೆ 03 ಹಂತಗಳಲ್ಲಿ ಸಮೀಕ್ಷೆ ನಡೆಸಲು ಕ್ರಮವಹಿಸಲಾಗಿದ್ದು, ಸಾರ್ವಜನಿಕರು ತಮ್ಮ ಕುಟುಂಬದ ಜಾತಿ, ಉಪಜಾತಿ ಮತ್ತು ಇತರೆ ಮಾಹಿತಿಗಳನ್ನು ನಿಖರವಾಗಿ ಗಣತಿದಾರರಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಮನ್ವಯ ಸಮಿತಿಗಳನ್ನು ರಚಿಸಲಾಗಿದ್ದು, ರಾಜ್ಯ ಮಟ್ಟದಲ್ಲಿ ತರಬೇತಿ ಪಡೆದ 03 ಜಿಲ್ಲಾ ಮಟ್ಟದ ಮಾಸ್ಟರ್ ಟ್ರೆöÊನರ್‌ಗಳನ್ನು, 50 ವಿಧಾನಸಭಾ ಕ್ಷೇತ್ರವಾರು ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೆöÊನರ್ ಹಾಗೂ 125 ಸೂಪರ್ ವೈಸರ್, 2,674 ಗಣತಿದಾರರರು ಮತ್ತು 200 ಹೆಚ್ಚುವರಿ ಗಣತಿದಾರರನ್ನು ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈಗಾಗಲೇ ತಾಲ್ಲೂಕು ಮಟ್ಟದ ಮಾಸ್ಟರ್ ಟ್ರೆöÊನರ್‌ಗಳಿಗೆ ಜಿಲ್ಲಾಡಳಿತದಿಂದ ತರಬೇತಿ ನೀಡಲಾಗಿದೆ. ಮಾಸ್ಟರ್ ಟ್ರೆöÊನರ್‌ಗಳು ತಮ್ಮ ವಿಧಾನಸಭಾ ಕ್ಷೇತ್ರದಲ್ಲಿನ ನಗರ ಪ್ರದೇಶ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕೆಲವು ಕುಟುಂಬಗಳ ಮಾದರಿ ಸಮೀಕ್ಷೆ ಕೈಗೊಂಡಿದ್ದು, ಸಮೀಕ್ಷೆಯಲ್ಲಿ ಬಳಸುವ ಮೊಬೈಲ್ ಆಪ್ ಬಗ್ಗೆ ಪರೀಕ್ಷೆ ನಡೆಸಿ, ಅದರ ಬಳಕೆ ಬಗ್ಗೆ ಖಾತರಿಪಡಿಸಿಕೊಂಡಿದ್ದಾರೆ.
ಮೇ 03 ರಂದು ಸಿರುಗುಪ್ಪದ ವಿವೇಕಾನಂದ ವಿದ್ಯಾಸಂಸ್ಥೆ, ಸಂಡೂರಿನ ಛತ್ರಪತಿ ಶಿವಾಜಿ ಶಾಲೆ, ಕುರುಗೋಡಿನ ಪ್ರಥಮ ದರ್ಜೆ ಕಾಲೇಜು, ಬಳ್ಳಾರಿ ನಗರದ ಸೆಂಟ್ ಜಾನ್ಸ್ ಕಾಲೇಜುಗಳಲ್ಲಿ 05 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 125 ಸೂಪರ್ ವೈಸರ್, 2,674 ಗಣತಿದಾರರು ಹಾಗೂ 200 ಹೆಚ್ಚುವರಿ ಗಣತಿದಾರರಿಗೆ ಸಮೀಕ್ಷೆ ಕುರಿತಂತೆ ಮಾಸ್ಟರ್ ಟ್ರೆöÊನರ್ ಗಳಿಂದ ತರಬೇತಿ ಮತ್ತು ಸಮೀಕ್ಷೆಗೆ ಬಳಸುವ ಮೊಬೈಲ್ ಅಪ್ ತಂತ್ರಾAಶದ ಬಗ್ಗೆ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ ಎಂದಿದ್ದಾರೆ.
ಸಹಾಯವಾಣಿ ಕೇಂದ್ರ ಆರಂಭ:
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಮೀಕ್ಷೆಗೆ ಸಂಬAಧಿಸಿದAತೆ ಸಾರ್ವಜನಿಕರು ತಮ್ಮ ಅಹವಾಲು, ಸಮಸ್ಯೆಗಳನ್ನು ಸಲ್ಲಿಸಲು ಹಾಗೂ ಸಮೀಕ್ಷೆ ಕುರಿತ ಮಾಹಿತಿ ಪಡೆಯಲು ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆಯ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ. ದೂರವಾಣಿ ಸಂಖ್ಯೆ: 8277888866 / 08392277100 ಆಗಿದ್ದು, ಸಾರ್ವಜನಿಕರು ಈ ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು.
ಜಿಲ್ಲಾ ಮಟ್ಟದ ಸಮೀಕ್ಷಾ ಕಾರ್ಯವನ್ನು ಸುಸೂತ್ರವಾಗಿ ಯಾವುದೇ ಲೋಪದೋಷಗಳು ಉಂಟಾಗದAತೆ ಸಮೀಕ್ಷೆ ಕಾರ್ಯ ಯಶಸ್ವಿಗೊಳಿಸಲು ವಿಧಾನಸಭಾ ಕ್ಷೇತ್ರವಾರು ಜಿಲ್ಲಾ ಮಟ್ಟದ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಿದ್ದು, ಸಮೀಕ್ಷೆ ಸಂದರ್ಭದಲ್ಲಿ ಯಾವುದೇ ಗೊಂದಲ, ಸಮಸ್ಯೆ ಉಂಟಾದಲ್ಲಿ ನೋಡಲ್ ಅಧಿಕಾರಿಗಳಿಗೆ ಸಂಪರ್ಕಿಸಬಹುದು.
ವಿಧಾನಸಭಾ ಕ್ಷೇತ್ರವಾರು ನೋಡೆಲ್ ಅಧಿಕಾರಿಗಳ ನೇಮಕ:
ಬಳ್ಳಾರಿ ನಗರ: ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಜಿಲ್ಲಾ ಕೌಶಲ್ಯಾಭಿವೃದ್…………..

LEAVE A REPLY

Please enter your comment!
Please enter your name here