ಬೆಂಗಳೂರು ನಗರ ಜಿಲ್ಲೆ, ಡಿಸೆಂಬರ್ 06:  ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 686.25 ಕೋಟಿ ಅಂದಾಜು ಮೌಲ್ಯದ ಒಟ್ಟು 21 ಎಕರೆ 0.37.08 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಯಿತು.

ಇಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ  ಖರಾಬು, ಗೋಮಾಳ, ಸರ್ಕಾರಿ, ರಾಜಕಾಲುವೆ, ಬಾವಿ, ಗುಂಡುತೋಪು, ಸರ್ಕಾರಿ ಗುಟ್ಟೆ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.

ಬೆಂಗಳೂರು ಪೂರ್ವ ತಾಲ್ಲೂಕಿನ ಕೆ.ಆರ್.ಪುರ ಹೋಬಳಿಯ ಹೂಡಿ ಗ್ರಾಮದ ಸ.ನಂ 7 ಖರಾಬು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.04.08  ಗುಂಟೆಗಳಾಗಿದ್ದು ಅಂದಾಜು ಮೌಲ್ಯದ ರೂ.4.00 ಕೋಟಿಗಳಾಗಿರುತ್ತದೆ. ಬಿದರಹಳ್ಳಿ ಹೋಬಳಿಯ ಮಾರಗೊಂಡನಹಳ್ಳಿ ಗ್ರಾಮದ ಸ.ನಂ 35 ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.17  ಗುಂಟೆಗಳಾಗಿದ್ದು ಅಂದಾಜು ಮೌಲ್ಯದ ರೂ.6.00 ಕೋಟಿಗಳಾಗಿರುತ್ತದೆ.

ಆನೇಕಲ್ ತಾಲ್ಲೂಕಿನ ಕಸಬಾ ಹೋಬಳಿಯ ವಣಕನಹಳ್ಳಿ ಗ್ರಾಮದ ಸ.ನಂ. 1/23 ಸರ್ಕಾರಿ ಜಾಗ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.10  ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 0.10 ಲಕ್ಷಗಳಾಗಿರುತ್ತದೆ. ಅತ್ತಿಬೆಲೆ ಹೋಬಳಿಯ ಇಂಡ್ಲಬೆಲೆ ಗ್ರಾಮದ ಸ.ನಂ. 128 &130 ರಾಜಕಾಲುವೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.06 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 0.25 ಲಕ್ಷಗಳಾಗಿರುತ್ತದೆ.  ಅತ್ತಿಬೆಲೆ ಹೋಬಳಿಯ ಚಂದಾಪುರ  ಗ್ರಾಮದ ಸ.ನಂ. 37 ಬಾವಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.22 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 0.40 ಲಕ್ಷಗಳಾಗಿರುತ್ತದೆ. ಸರ್ಜಾಪುರ ಹೋಬಳಿಯ ಮುತ್ತನಲ್ಲೂರು ಅಮಾನಿಕೆರೆ ಗ್ರಾಮದ ಸ.ನಂ. 64 ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.13  ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 0.40 ಲಕ್ಷಗಳಾಗಿರುತ್ತದೆ. ಸರ್ಜಾಪುರ ಹೋಬಳಿಯನಾರಾಯಣಘಟ್ಟ ಗ್ರಾಮದ ಸ.ನಂ. 144,143,136,138, 135, 134, 145,  ರಾಜಕಾಲುವೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 3 ಎಕರೆಗಳಾಗಿದ್ದು ಅಂದಾಜು ಮೌಲ್ಯ  8.00 ಕೋಟಿಗಳಾಗಿರುತ್ತದೆ.

ಬೆಂಗಳೂರು ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿಯ ರಘುವನಹಳ್ಳಿ ಗ್ರಾಮದ  ಸ.ನಂ 21ರ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.11 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 5.98 ಕೋಟಿಗಳಾಗಿರುತ್ತದೆ.

ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ  ಹೋಬಳಿಯ ರಾಮಪಾಳ್ಯ ಗ್ರಾಮದ  ಸ.ನಂ 29ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ  1 ಎಕರೆ 0.19 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 4.50 ಕೋಟಿಗಳಾಗಿರುತ್ತದೆ. ಯಶವಂತಪುರ  ಹೋಬಳಿಯ ಚಿಕ್ಕಬಾಣಾವರ ಗ್ರಾಮದ ಸ.ನಂ 52 ರ  ಸರ್ಕಾರಿ ಗುಟ್ಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.29 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 25.00 ಕೋಟಿಗಳಾಗಿರುತ್ತದೆ. 

ಯಲಹಂಕ ತಾಲ್ಲೂಕಿನ  ಯಲಹಂಕ ಹೋಬಳಿಯ ಚೊಕ್ಕನಹಳ್ಳಿ ಗ್ರಾಮದ  ಸ.ನಂ. 75/4 ಸರ್ಕಾರಿ ಜಾಗ ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 14ಎಕರೆ 0.26 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 631.62 ಕೋಟಿಗಳಾಗಿರುತ್ತದೆ. 

ಇದೇ ಸಂದರ್ಭದಲ್ಲಿ  ಜಿಲ್ಲಾಧಿಕಾರಿಗಳ ಕಚೇರಿಯ ಕಚೇರಿ ಸಹಾಯಕರು, ವಿವಿಧ ತಾಲ್ಲೂಕಿನ ತಹಶೀಲ್ದಾರ್  ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here