ಬೆಳಗಾವಿ:ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿ ಸಲ್ಲಿಸಿದ ಆರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯವು (ಟ್ರಯಲ್ ಕೋರ್ಟ್) ತಿರಸ್ಕರಿಸಿರುವುದು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡು ರಾಜಕೀಯ ವಿರೋಧಿಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎನ್ನುವುದನ್ನು ಮತ್ತೊಮ್ಮೆ ಜಗಜ್ಜಾಹೀರಾಗಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯ ಸುವರ್ಣಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ದ್ವೇಷ ರಾಜಕೀಯವನ್ನು ಒಕ್ಕೊರಲಿನಿಂದ ಖಂಡಿಸುತಿದ್ದೇವೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವರಾದ ಅಮಿತ್ ಷಾ ಅವರು ನೀಡುತ್ತಿರುವ ಇಂತಹ ಕಿರುಕುಳವನ್ನು ಎದುರಿಸಲು ಶ್ರೀಮತಿ ಸೋನಿಯಾ ಗಾಂಧಿ ಮತ್ತವರ ಕುಟುಂಬದ ಜೊತೆ ನೈತಿಕ ಬೆಂಬಲವಾಗಿ ನಾವು ನಿಂತಿದ್ದೇವೆ, ದೇಶದ ಕೋಟ್ಯಂತರ ಜನರಿದ್ದಾರೆ ಎಂದು ಪ್ರತಿಭಟನೆವೇಳೆ ಹೇಳಿದರು.





