ಬೆಂಗಳೂರು ನಗರ ಜಿಲ್ಲೆ, ಫೆಬ್ರವರಿ 27: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 8.20 ಕೋಟಿ ಅಂದಾಜು ಮೌಲ್ಯದ ಒಟ್ಟು 06 ಎಕರೆ 0.35 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ. ಅವರ ನೇತೃತ್ವದಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಯಿತು.
ಇಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಸರ್ಕಾರಿ ಗೋಮಾಳ, ಸರ್ಕಾರಿ ಕುಂಟೆ ರಾಜಕಾಲುವೆ, ಹಾಗೂ ಬಂಡಿದಾರಿ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.
ಆನೇಕಲ್ ತಾಲ್ಲೂಕಿನ ಅತ್ತಿಬೆಲೆ ಹೋಬಳಿಯ ಯಡವನಹಳ್ಳಿ ಗ್ರಾಮದ ಸ.ನಂ 63ರ ಸರ್ಕಾರಿ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 2 ಎಕರೆಗಳಾಗಿದ್ದು ಅಂದಾಜು ಮೌಲ್ಯ ರೂ 3.00 ಕೋಟಿಗಳಾಗಿರುತ್ತದೆ. ಕಸಬಾ-1 ಹೋಬಳಿಯ ಬಗ್ಗನದೊಡ್ಡಿ ಗ್ರಾಮದ ಸ.ನಂ 96ರ ಸರ್ಕಾರಿ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1 ಎಕರೆಗಳಾಗಿದ್ದು, ಅಂದಾಜು ಮೌಲ್ಯ ರೂ 1.00 ಕೋಟಿಗಳಾಗಿರುತ್ತದೆ. ಸರ್ಜಾಪುರ ಹೋಬಳಿಯ ಕೂಗೂರು ಗ್ರಾಮದ ಸ.ನಂ 33ರ ಸರ್ಕಾರಿ ಕುಂಟೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.20 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.70 ಲಕ್ಷಗಳಾಗಿರುತ್ತದೆ. ಜಿಗಣಿ ಹೋಬಳಿಯ ಮಾರಗೊಂಡನಹಳ್ಳಿ ಗ್ರಾಮದ ಸ.ನಂ 53ರ ರಾಜಕಾಲುವೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1 ಎಕರೆ 0.20 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 1.00 ಕೋಟಿಗಳಾಗಿರುತ್ತದೆ. ಜಿಗಣಿ ಹೋಬಳಿಯ ಮಾರಗೊಂಡನಹಳ್ಳಿ ಗ್ರಾಮದ ಸ.ನಂ 53ರ ಬಂಡಿದಾರಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 1 ಎಕರೆ 0.20 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 1.00 ಕೋಟಿಗಳಾಗಿರುತ್ತದೆ.
ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ಕುದುರೆಗೆರೆ ಗ್ರಾಮದ ಸ.ನಂ 18 ರ ಸರ್ಕಾರಿ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.15 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 1.50 ಕೋಟಿಗಳಾಗಿರುತ್ತದೆ.
ಇದೇ ಸಂದರ್ಭದಲ್ಲಿ ಬೆಂಗಳೂರು ನಗರದ ವಿವಿಧ ತಾಲ್ಲೂಕಿನ ತಹಶೀಲ್ದಾರ್ ರವರು ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು, ಉಪಸ್ಥಿತರಿದ್ದರು





