ಮೈಸೂರು:ಕುರುಬರನ್ನು ಎಸ್‌ಟಿ ಪಟ್ಟಿಗೆ ಸೇರಿಸಿ: ನಿರಂಜನಂದ ಪುರಿ ಸ್ವಾಮೀಜಿ ಹೋರಾಟಕ್ಕೆ ಮತ್ತೆ ಧ್ವನಿ ಎತ್ತಿದ ಕೆಂಚೇಗೌಡರು.
ಹುಣಸೂರು ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ, ಕಾಗಿನೆಲೆ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ನಿರಂಜನಂದ ಪುರಿ ಸ್ವಾಮೀಜಿಗಳ ನೇತೃತ್ವದಲ್ಲಿ ಹಲವು ವರ್ಷಗಳಿಂದ ನಡೆಯುತ್ತಿರುವ ಹೋರಾಟಕ್ಕೆ ಮತ್ತಷ್ಟು ಪುಷ್ಟಿ ನೀಡುವ ಉದ್ದೇಶದಿಂದ ಹುಣಸೂರಿನ ಕುರುಬ ಸಮಾಜದ ಮುಖಂಡ ಕೆಂಚೇಗೌಡ ಅವರು ಮತ್ತೊಮ್ಮೆ ಸರ್ಕಾರದ ಗಮನ ಸೆಳೆದರು.
ಹುಣಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿರಂಜನಂದ ಪುರಿ ಸ್ವಾಮೀಜಿಗಳು ಕಾಗಿನೆಲೆಯಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಸೇರಿದಂತೆ ಹಲವು ಹೋರಾಟಗಳನ್ನು ನಡೆಸಿದ್ದು, ರಾಜ್ಯದಾದ್ಯಂತ ಸಾವಿರಾರು ಕುರುಬ ಸಮಾಜದ ಮುಖಂಡರು ಈ ಬೇಡಿಕೆಗೆ ಬೆಂಬಲ ನೀಡಿದ್ದಾರೆ ಎಂದು ಹೇಳಿದರು.
ಕುರುಬ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸುವ ಕುರಿತು ರಾಜ್ಯ ಸರ್ಕಾರ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಅದನ್ನು ಶೀಘ್ರ ಪರಿಗಣಿಸಿ ಅನುಮೋದನೆ ನೀಡಬೇಕು ಎಂದು ಒತ್ತಾಯಿಸಿದರು.
ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಕುರುಬ ಸಮುದಾಯದ ಅಭಿವೃದ್ಧಿಗೆ ಸಂವಿಧಾನಾತ್ಮಕವಾಗಿ ದೊರೆಯಬೇಕಾದ ಸೌಲಭ್ಯಗಳು ಲಭಿಸುವಂತೆ ಕೇಂದ್ರ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ಸುಪ್ರೀಂ ಕೋರ್ಟ್‌ನ ಕೆಲವು ನಿಬಂಧನೆಗಳು ಹಾಗೂ ಸಂವಿಧಾನಾತ್ಮಕ ತಿದ್ದುಪಡಿಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಆದಷ್ಟು ಬೇಗ ಕುರುಬ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸುವ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ನಿವೃತ್ತ ಪಿಡಿಒ ಕೆಂಚೇಗೌಡ, ನಿವೃತ್ತ ತಹಶೀಲ್ದಾರ್ ಜವರೇಗೌಡ, ನಿವೃತ್ತ ಎಎಸ್‌ಐ ಮಾದೇಗೌಡ ಹಾಗೂ ಹರೀಶ್ ಗುಡ್ಡಪ್ಪ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here